Home ಟಾಪ್ ಸುದ್ದಿಗಳು ರಾಮನಗರ: 300ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ರಾಮನಗರ: 300ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ರಾಮನಗರ: ಡಿಸಿಎಂ ಡಿ.ಕೆ.ಶಿವಕುಮಾರ್ ಆಪರೇಷನ್ ಹಸ್ತ ಆರಂಭಿಸಿದ್ದು, ಚನ್ನಪಟ್ಟಣ, ಮಾಗಡಿ, ಆನೇಕಲ್, ಕುಣಿಗಲ್ ಭಾಗದ ಜೆಡಿಎಸ್ ನ 300ಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಎಲ್ಲರಿಗೂ ಕಾಂಗ್ರೆಸ್ ಶಾಲು ಹೊದಿಸಿ ಸ್ವತಃ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಗೆ ಬರಮಾಡಿಕೊಂಡಿದ್ದಾರೆ.

ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್, ಕೆಲ ದಿನಗಳಿಂದ ಬೇರೆ ಬೇರೆ ಪಕ್ಷದ ಮುಖಂಡರು ಕಾಂಗ್ರೆಸ್ ಸೇರುತ್ತಲೇ ಇದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇರದ ಬೇರೆ ಬೇರೆ ಭಾಗದವರು ಸುಮಾರು 5000 ಮುಖಂಡರು ಕಾಂಗ್ರೆಸ್ ಗೆ ಬಂದಿದ್ದಾರೆ ಎಂದು ಹೇಳಿದ್ದಾರೆ.

Join Whatsapp
Exit mobile version