ರಾಮಮಂದಿರ ನಿರ್ಮಾಣಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಿಂದ 5 ಲಕ್ಷ ರೂ. ದೇಣಿಗೆ

Prasthutha|

ನವದೆಹಲಿ : ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ 5 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಆ ಮೂಲಕ ರಾಮ ಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಅಭಿಯಾನಕ್ಕೆ ಅವರು ಚಾಲನೆ ನೀಡಿದ್ದಾರೆ.

- Advertisement -

ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಶುಕ್ರವಾರ ಚಾಲನೆ ನೀಡಲಾಗಿದೆ. ರಾಷ್ಟ್ರಪತಿಗಳು ದೇಶದ ಮೊದಲ ನಾಗರಿಕರು. ಹೀಗಾಗಿ ಅಭಿಯಾನಕ್ಕೆ ಚಾಲನೆ ನೀಡಲು ಅವರ ಬಳಿ ಕೇಳಿಕೊಂಡೆವು ಎಂದು ಟ್ರಸ್ಟ್ ನ ಅಲೋಕ್ ಕುಮಾರ್ ಹೇಳಿದ್ದಾರೆ.

ಕೋವಿಂದ್ ಅವರು 5,01,000 ರೂ. ದೇಣಿಗೆ ನೀಡಿ ಅಭಿಯಾನಕ್ಕೆ ಚಾಲನೆ ನೀಡಿದರು. ರಾಮ ಮಂದಿರ ನಿರ್ಮಾಣಕ್ಕೆದೇಣಿಗೆ ಸಂಗ್ರಹದ ಬೃಹತ್ ಅಭಿಯಾನ ಫೆ.27ರ ವರೆಗೂ ಮುಂದುವರಿಯಲಿದೆ.  

Join Whatsapp