Home ಟಾಪ್ ಸುದ್ದಿಗಳು ರಾಮಮಂದಿರ ನಿರ್ಮಾಣಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಿಂದ 5 ಲಕ್ಷ ರೂ. ದೇಣಿಗೆ

ರಾಮಮಂದಿರ ನಿರ್ಮಾಣಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಿಂದ 5 ಲಕ್ಷ ರೂ. ದೇಣಿಗೆ

ನವದೆಹಲಿ : ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ 5 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಆ ಮೂಲಕ ರಾಮ ಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಅಭಿಯಾನಕ್ಕೆ ಅವರು ಚಾಲನೆ ನೀಡಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಶುಕ್ರವಾರ ಚಾಲನೆ ನೀಡಲಾಗಿದೆ. ರಾಷ್ಟ್ರಪತಿಗಳು ದೇಶದ ಮೊದಲ ನಾಗರಿಕರು. ಹೀಗಾಗಿ ಅಭಿಯಾನಕ್ಕೆ ಚಾಲನೆ ನೀಡಲು ಅವರ ಬಳಿ ಕೇಳಿಕೊಂಡೆವು ಎಂದು ಟ್ರಸ್ಟ್ ನ ಅಲೋಕ್ ಕುಮಾರ್ ಹೇಳಿದ್ದಾರೆ.

ಕೋವಿಂದ್ ಅವರು 5,01,000 ರೂ. ದೇಣಿಗೆ ನೀಡಿ ಅಭಿಯಾನಕ್ಕೆ ಚಾಲನೆ ನೀಡಿದರು. ರಾಮ ಮಂದಿರ ನಿರ್ಮಾಣಕ್ಕೆದೇಣಿಗೆ ಸಂಗ್ರಹದ ಬೃಹತ್ ಅಭಿಯಾನ ಫೆ.27ರ ವರೆಗೂ ಮುಂದುವರಿಯಲಿದೆ.  

Join Whatsapp
Exit mobile version