ಕಾಂಗ್ರೆಸ್ ನ ಹಿರಿಯ ನಾಯಕ ರಾಣಾ ಗೋಸ್ವಾಮಿ ಅವರು ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಸಕ್ರಿಯ ಸದಸ್ಯತ್ವಕ್ಕೆ ಬುಧವಾರ ರಾಜೀನಾಮೆ ಸಲ್ಲಿಸಿದ್ದಾರೆ.
ಈಗಾಗಲೇ ಹಿಮಾಚಲ ಪ್ರದೇಶದಲ್ಲಿ ಅಧಿಕಾರವನ್ನು ಕಳೆದುಕೊಳ್ಳುವ ಭಯದಲ್ಲಿರುವ ಕಾಂಗ್ರೆಸ್ ಗೆ ಈಗ ಮತ್ತೊಂದು ಆತಂಕ ಶುರುವಾಗಿದೆ. ಅಸ್ಸಾಂನ ಸಾಂಸ್ಥಿಕ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಅಸ್ಸಾಂ ಕಾಂಗ್ರೆಸ್ ಹಿರಿಯ ನಾಯಕ ರಾಣಾ ಗೋಸ್ವಾಮಿ ಅವರು ಮಾರ್ಚ್ 4 ರಂದು ಬಿಜೆಪಿಗೆ ಸೇರುವ ನಿರೀಕ್ಷೆಯಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೇಎನ್ಇ ವರದಿ ಮಾಡಿದೆ.