ದೆಹಲಿಯಲ್ಲಿ ಬಿಜೆಪಿ ಸರ್ಕಾರದಿಂದ ‘ಅಘೋಷಿತ ತುರ್ತು ಪರಿಸ್ಥಿತಿ’: ರಣದೀಪ್ ಸುರ್ಜೇವಾಲಾ ಆರೋಪ

Prasthutha|

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸತ್ಯಾಗ್ರಹ ಮೆರವಣಿಗೆ ನಡೆಸಲು ಕಾಂಗ್ರೆಸ್ ಗೆ ಅನುಮತಿ ನಿರಾಕರಿಸಿದ್ದಕ್ಕಾಗಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ, ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರವು ಇಡೀ ಕೇಂದ್ರ ದೆಹಲಿ ಪ್ರದೇಶದಲ್ಲಿ “ಅಘೋಷಿತ ತುರ್ತು ಪರಿಸ್ಥಿತಿ” ಹೇರಿದೆ ಎಂದು ಸೋಮವಾರ ಟೀಕಿಸಿದ್ದಾರೆ.

- Advertisement -

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಾವು ಇಡಿ ಕಚೇರಿವರೆಗೆ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸುತ್ತೇವೆ. ನಾವು ಸಂವಿಧಾನದ ರಕ್ಷಕರು, ನಾವು ತಲೆಬಾಗುವುದಿಲ್ಲ ಅಥವಾ ಹೆದರುವುದಿಲ್ಲ. ದೊಡ್ಡ ಪೊಲೀಸ್ ಪಡೆಯನ್ನು ನಿಯೋಜಿಸುವ ಮೂಲಕ, ಮೋದಿ ಸರ್ಕಾರವು ಕಾಂಗ್ರೆಸ್ ಗೆ ಹೆದರಿದೆ ಎಂಬುದು ಸಾಬೀತಾಗಿದೆ” ಎಂದು ಅವರು ಹೇಳಿದರು.

Join Whatsapp