Home ಟಾಪ್ ಸುದ್ದಿಗಳು ರಾಜ್ಯ ಬಿಜೆಪಿ ಸರ್ಕಾರ ಕಮಿಷನ್ ಪಡೆಯುವ ಮೂಲಕ ಭ್ರಷ್ಟಾಚಾರದಲ್ಲಿ ಹೊಸ ಮೈಲುಗಲ್ಲು: ರಣದೀಪ್ ಸುರ್ಜೇವಾಲ ಟೀಕೆ

ರಾಜ್ಯ ಬಿಜೆಪಿ ಸರ್ಕಾರ ಕಮಿಷನ್ ಪಡೆಯುವ ಮೂಲಕ ಭ್ರಷ್ಟಾಚಾರದಲ್ಲಿ ಹೊಸ ಮೈಲುಗಲ್ಲು: ರಣದೀಪ್ ಸುರ್ಜೇವಾಲ ಟೀಕೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಕಮಿಷನ್ ಪಡೆಯುವ ಮೂಲಕ ಭ್ರಷ್ಟಾಚಾರದಲ್ಲಿ ಹೊಸ ಮೈಲುಗಲ್ಲು ಸಾಧಿಸಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಮು ಗಲಭೆಗಳ ವಿರುದ್ಧ  ಬೊಮ್ಮಾಯಿ ಮೌನಿಯಾಗಿರುವುದು ಯಾಕೆ? ಬಿಜೆಪಿಯ ಗೂಂಡಾಗಳು ಹಾಗೂ ಬಜರಂಗದಳದವರು  ಅಲ್ಪಸಂಖ್ಯಾತರ ವಿರುದ್ಧ ನಿತ್ಯ ದಾಳಿ ಮಾಡುತ್ತಿದ್ದು, ರಾಜ್ಯದಲ್ಲಿ ದಿನನಿತ್ಯ ಬಿಗುವಿನ ವಾತಾವರಣ ಸೃಷ್ಟಿಸುತ್ತಿದೆ ಎಂದು ಆರೋಪಿಸಿದರು.

ಈ ಸರ್ಕಾರದಲ್ಲಿ ಬಹುತೇಕ ಸಚಿವರು ಕಳಂಕಿತರು. ಕೆಲವರು ಜಾಮೀನಿನ ಮೇಲೆ ಹೊರಗಿದ್ದರೆ, ಮತ್ತೆ ಕೆಲವರು ಜಾಮೀನಿನ ನಿರೀಕ್ಷಣೆಯಲ್ಲಿದ್ದಾರೆ. ಅವರನ್ನು ವಜಾಗೊಳಿಸಬೇಕು. ಒಂದು ವೇಳೆ ವಜಾಗೊಳಿಸದಿದ್ದರೆ ಬೊಮ್ಮಾಯಿ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

Join Whatsapp
Exit mobile version