Home ಟಾಪ್ ಸುದ್ದಿಗಳು ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನ ಸಮಗ್ರ ತನಿಖೆಯಾಗಲಿ: ಬೊಮ್ಮಾಯಿ

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನ ಸಮಗ್ರ ತನಿಖೆಯಾಗಲಿ: ಬೊಮ್ಮಾಯಿ

0

ನವದೆಹಲಿ: ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ಜಾಲದಲ್ಲಿ ಇರುವವರನ್ನು ಪತ್ತೆ ಹಚ್ಚಲು ಸಮಗ್ರವಾಗಿ, ಆಳವಾದ ತನಿಖೆ ನಡೆಸಬೇಕು. ನಮ್ಮ ಅವಧಿಯಲ್ಲಿ ರನ್ಯಾ ರಾವ್ ನಿರ್ದೇಶಕಿಯಾದ ಕಂಪನಿಗೆ ಜಮೀನು ನೀಡಿರುವುದು ಮುಖ್ಯಮಂತ್ರಿಯ ಹಂತದವರೆಗೂ ಬಂದಿರುವುದಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿರಾ ಕೈಗಾರಿಕಾ ಪ್ರದೇಶದಲ್ಲಿ ಮೆ. ಕ್ಸಿರೋಡಾ ಇಂಡಿಯಾ ಪ್ರೈ. ಲಿಮಿಟೆಡ್ ಸಂಸ್ಥೆಗೆ ಜಮೀನು ನೀಡಿದ್ದೇವೆ. ರನ್ಯಾ ರಾವ್ ಕಂಪನಿಯ ನಿರ್ದೇಶಕಿಯಾಗಿದ್ದಾರೆ. ಯಾರೇ ಉದ್ದಿಮೆ ಮಾಡುತ್ತೇವೆ ಎಂದು ಬಂದರೂ ನಾವು ಅವರಿಗೆ ಅಗತ್ಯ ಕರಾರುಗಳನ್ನು ಹಾಕುತ್ತೇವೆ. ಲ್ಯಾಂಡ್ ಆಡಿಟ್ ಕಮಿಟಿ ಅಂತ ಇರುತ್ತದೆ. ಆ ಸಮಿತಿಯಲ್ಲಿ ಪ್ರಧಾನ ಕಾರ್ಯದರ್ಶಿ ಸೇರಿ ಹಿರಿಯ ಅಧಿಕಾರಿಗಳು ಇರುತ್ತಾರೆ. ಅವರು ಸಂಬಂಧಪಟ್ಟ ಕಂಪನಿಗೆ ಎಷ್ಟು ಜಮೀನು ಬೇಕು. ಯಾವ ಭಾಗದಲ್ಲಿ ಜಮೀನು ಬೇಕಿದೆ ಎನ್ನುವುದನ್ನು ಪರಿಶೀಲಿಸಿ ಶಿಫಾರಸ್ಸು ಮಾಡುತ್ತಾರೆ ಎಂದರು.

500 ಕೋಟಿ ರೂ.ಗಳವರೆಗಿನ ಯೋಜನೆಗಳಿಗೆ ಸಂಬಂಧಪಟ್ಟ ಮಂತ್ರಿಗಳ ಹಂತದಲ್ಲಿ ತೀರ್ಮಾನ ಆಗುತ್ತದೆ. ಮುಖ್ಯಮಂತ್ರಿಯವರೆಗೂ ಬರುವುದಿಲ್ಲ ನನ್ನ ಹಂತದವರೆಗೂ ಅದು ಬಂದಿಲ್ಲ. ಕೈಗಾರಿಕಾ ಸಚಿವರ ನೇತೃತ್ವದಲ್ಲಿ ಸಿಂಗಲ್ ವಿಂಡೊ ಪ್ರೊಸಿಡಿಂಗ್ ಮೂಲಕ ಹಂಚಿಕೆ ಮಾಡುತ್ತಾರೆ. ಅವರಿಗೆ ಜಮೀನು ಹಂಚಿಕೆ ಮಾಡಿದ ಮೇಲೆ ಹಣ ಕಟ್ಟುವಂತೆ ನೊಟೀಸ್ ನೀಡಲಾಗಿದೆ. ಅವರು ಹಣ ಕಟ್ಟದಿರುವುದರಿಂದ ಅವರಿಗೆ ಭೂಮಿ ಹಂಚಿಕೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

NO COMMENTS

LEAVE A REPLY

Please enter your comment!
Please enter your name here

Exit mobile version