ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆಯೇ ಅತ್ಯಾಚಾರವೆಸಗಿ ಬ್ಲ್ಯಾಕ್ ಮೇಲ್ : ಅರೋಪಿಗಳ ವಿರುದ್ದ ಎಫ್ ಐ ಆರ್

Prasthutha: June 15, 2021

ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಮೂವರು ವ್ಯಕ್ತಿಗಳು ಅತ್ಯಾಚಾರ ಮಾಡಿರುವ ಕುರಿತು ಮುಂಬೈನ ಪೊವಾಯಿನ ಮೇಘವಾಡಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಸಹಾಯಕ ಪೊಲೀಸ್ ಅಧಿಕಾರಿಯ ಮೇಲೆ ಮೂವರು ವ್ಯಕ್ತಿಗಳು ಲೈಂಗಿಕ ದೌರ್ಜನ್ಯ ಮತ್ತು ಬ್ಲ್ಯಾಕ್ ಮೇಲ್ ನಡೆಸಿದ್ದಾರೆ ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಕರಣದ ಮುಖ್ಯ ಆರೋಪಿಯು ಮಹಿಳಾ ಪೊಲೀಸ್ ಅಧಿಕಾರಿಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯಗೊಂಡ್ಡಿದ್ದು ನಂತರ ಸಂಭಾಷಣೆಯನ್ನು ನಡೆಸಿ ಮುದುವೆಯಾಗುವ ನೆಪದಲ್ಲಿ ಪೊಲೀಸ್ ಅಧಿಕಾರಿಯೊಂದಿಗೆ ದೈಹಿಕ ಸಂಬಂಧವನ್ನೂ ಸಹ ಬೆಳೆಸಿದ್ದಾನೆ. ಇದಾದ ಮೇಲೆ ಮಹಿಳಾ ಅಧಿಕಾರಿಯೊಂದಿಗಿನ ಖಾಸಗಿ ಕ್ಷಣಗಳನ್ನು ವಿಡಿಯೋ ಮಾಡಿ ಆ ಮೂಲಕ ಅಧಿಕಾರಿಗೆ ಬ್ಲಾಕ್ ಮೇಲೆ ಆರಂಭಿಸಿದ್ದಾನೆ. ಇದಾದ ಮೇಲೆ ಆರೋಪಿಯ ಇಬ್ಬರು ಸ್ನೇಹಿತರು ಕೂಡ ಮಹಿಳಾ ಅಧಿಕಾರಿಯ ಮೇಲೆ ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರಕರಣದ ಮುಖ್ಯ ಆರೋಪಿಯು ಔರಂಗಾಬಾದ್ ಜಿಲ್ಲೆಗೆ ಸೇರಿದವನಾಗಿದ್ದು ಬ್ಯಾಂಕ್‌ ಉದ್ಯೋಗಿಯಾಗಿರುತ್ತಾನೆ. ಆರೋಪಿಯ ಸ್ನೇಹಿತರು ಮತ್ತು ಆರೋಪಿ ಸಂತ್ರಸ್ತ ಮಹಿಳಾ ಅಧಿಕಾರಿಗೆ ಜೀವ ಬೆದರಿಕೆಯನ್ನು ಕೂಡ ಒಡ್ಡಿದ್ದು ತಮ್ಮೊಂದಿಗೆ ಸಹಕರಿಸದಿದ್ದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಗೊಳಿಸುವುದಾಗಿ ಸತತವಾಗಿ ಕಿರುಕುಳ ನೀಡಿದ್ದಾರೆ. ಆರೋಪಿಗಳ ಕಿರುಕುಳದಿಂದ ಬೇಸತ್ತ ಪೊಲೀಸ್ ಅಧಿಕಾರಿ ಈಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

IPC ಸೆಕ್ಷನ್ 376 (ಅತ್ಯಾಚಾರ) ಮತ್ತು ಸೆಕ್ಷನ್ 420 (ಮೋಸ) ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಆರಂಭಿಸಿದ್ದಾರೆ. ಮುಂಬೈ ಪೊಲೀಸರು ಆರೋಪಿಗಳ ಬಂಧನಕ್ಕಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ