ಕಲಬುರಗಿ : ಕೋವಿಡ್‌ ಸೋಂಕಿತೆಯ ಮೇಲೆ ಆಸ್ಪತ್ರೆ ಸಿಬ್ಬಂದಿಯಿಂದ ಅತ್ಯಾಚಾರಕ್ಕೆ ಯತ್ನ

Prasthutha|

ಕಲಬುರಗಿ : ಇಲ್ಲಿನ ಜೆಐಎಂಎಸ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೋವಿಡ್‌ ಸೋಂಕಿತೆ ರೋಗಿಯೊಬ್ಬರ ಮೇಲೆ ಆಸ್ಪತ್ರೆಯ ಸಿಬ್ಬಂದಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಮಧ್ಯರಾತ್ರಿ ವೇಳೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

- Advertisement -

ಕಾಳಗಿ ತಾಲೂಕಿನ ಸೋಂಕಿತೆಯೊಬ್ಬರನ್ನು ಜೂ.2ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂ.8ರಂದು ಆಸ್ಪತ್ರೆ ಸಿಬ್ಬಂದಿ ಆರೋಪಿ ಪಿಂಟು ಎಂಬಾತ ಅಸೌಖ್ಯದಿಂದಿದ್ದ ಮಹಿಳೆಯ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ.

ಆರೋಪಿ ವಿರುದ್ಧ ಸಂತ್ರಸ್ತೆಯ ಪತಿ ಮತ್ತು ಕುಟುಂಬಸ್ಥರು ಬ್ರಹ್ಮಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿ ಪಿಂಟುನನ್ನು ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ.



Join Whatsapp