ರಾಘವೇಶ್ವರ ಶ್ರೀ ವಿರುದ್ಧ ಅತ್ಯಾಚಾರ ಪ್ರಕರಣ: ಖುಲಾಸೆ ಪ್ರಶ್ನಿಸಿದ್ದ ಮೇಲ್ಮನವಿ ಹೈಕೋರ್ಟ್ ನಲ್ಲಿ ವಜಾ

Prasthutha|

- Advertisement -

ಬೆಂಗಳೂರು : ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಿಂದ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಶ್ರೀ ಅವರನ್ನು ದೋಷಮುಕ್ತಗೊಳಿಸಿ ವಿಚಾರಣಾ ನ್ಯಾಯಾಲಯ ನೀಡಿದ್ದ ತೀರ್ಪನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಎರಡೂ ಮೇಲ್ಮನವಿಗಳನ್ನು ವಜಾಗೊಳಿಸಿದೆ.

ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ರಾಜ್ಯ ಸರಕಾರ(ಸಿಐಡಿ) ಹಾಗೂ ಪ್ರಕರಣದ ಸಂತ್ರಸ್ತೆ ರಾಮಕಥಾ ಗಾಯಕಿ ಸಲ್ಲಿಸಿದ್ದ ಎರಡು ಪ್ರತ್ಯೇಕ ಕ್ರಿಮಿನಲ್ ಮರು ಪರಿಶೀಲನಾ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಪ್ರಕಟಿಸಿತು. ಎರಡೂ ಮೇಲ್ಮನವಿಗಳನ್ನು ವಜಾಗೊಳಿಸಿದೆ.

- Advertisement -

ತೀರ್ಪಿನಲ್ಲಿ ವಿಚಾರಣಾ ನ್ಯಾಯಾಲಯದ ಆದೇಶದಲ್ಲಿ ಮಧ್ಯಪ್ರವೇಶಿಸುವ ಯಾವುದೇ ಸೂಕ್ತ ಕಾರಣ ಇಲ್ಲವೆಂದು ಅಭಿಪ್ರಾಯಪಟ್ಟು ಅರ್ಜಿಗಳನ್ನು ವಜಾಗೊಳಿಸಿದೆ.



Join Whatsapp