ಮಂಗಳೂರು: ಬುದ್ಧಿಮಾಂದ್ಯೆಯನ್ನು ಅತ್ಯಾಚಾರಗೈದ ಆರೋಪದಲ್ಲಿ 65 ವರ್ಷದ ವೃದ್ಧನ ವಿರುದ್ಧ ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
65 ವರ್ಷ ಪ್ರಾಯದ ರಾಜ್ಭಟ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.
ಚೇಳಾಯಾರು ಪದವು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಸೂರಿಂಜೆ ಮೂಲದ ಆರೋಪಿ ರಾಜ್ಭಟ್ ಬ್ರೋಕರ್ ಕೆಲಸ ಮಾಡಿಕೊಂಡಿದ್ದು, ಆತನು ಮಾ.27ರಂದು ಮಂಗಳೂರು ಹೊರವಲಯದ ಸುರತ್ಕಲ್ ಪ್ರದೇಶದ ಬುದ್ಧಿಮಾಂದ್ಯೆಯನ್ನು ಆಕೆಯ ಮನೆಯಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಆರೋಪಿಯು ವಿವಾಹಿತನಾಗಿದ್ದು, ಪತ್ನಿ ಮತ್ತು ಮಕ್ಕಳಿಂದ ದೂರವಾಗಿದ್ದಾನೆ ಎಂದು ತಿಳಿದುಬಂದಿದೆ.
ಅತ್ಯಾಚಾರ ಎಸಗಿದ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗುತ್ತಲೇ ಆರೋಪಿಯು ತಲೆಮರೆಸಿಕೊಂಡಿದ್ದು, ಪೊಲೀಸರು ಆರೋಪಿಯ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ.