ಜಾರ್ಖಂಡ್ ನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ; ಭೀಕರ ಹಿಂಸೆ ನೀಡಿದ ದುಷ್ಕರ್ಮಿಗಳು

Prasthutha|

ರಾಂಚಿ : ಜಾರ್ಖಂಡ್ ನ ಛಾತ್ರ ಜಿಲ್ಲೆಯಲ್ಲಿ 50ರ ಹರೆಯದ ಮಹಿಳೆಯೊಬ್ಬರ ಮೇಲೆ ಮೂವರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ವರದಿಯಾಗಿದೆ. ಘಟನೆಗೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದೆ.

- Advertisement -

ಛಾತ್ರ ಜಿಲ್ಲೆಯ ಕೊಬ್ನಾ ಗ್ರಾಮದಲ್ಲಿ ಘಟನೆ ನಡೆದಿದೆ. ರಾತ್ರಿ 10 ಗಂಟೆಗೆ ಮನೆಯಿಂದ ಹೊರಗೆ ಬಂದಿದ್ದ ವೇಳೆ ದುಷ್ಕರ್ಮಿಗಳು ತನ್ನನ್ನು ಅಪಹರಿಸಿದ್ದರು. ಬಳಿಕ ಅವರು ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಲ್ಲದೆ, ಖಾಸಗಿ ಭಾಗಕ್ಕೆ ಲೋಹದ ವಸ್ತುವನ್ನು ತಳ್ಳಿ ಭೀಕರ ಹಿಂಸೆಯನ್ನು ನೀಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಸ್ಥಳೀಯ ಸರಕಾರಿ ಆಸ್ಪತ್ರೆಗೆ ಮಹಿಳೆಯನ್ನು ಕರೆದೊಯ್ಯಲಾಗಿತ್ತು. ಆದರೆ, ಆಕೆಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಆಕೆಯನ್ನು ಬಿಹಾರದ ಗಯಾ ಜಿಲ್ಲೆಯ ಸರಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ.

- Advertisement -

ಉತ್ತರ ಪ್ರದೇಶ ಬದೌನ್ ನಲ್ಲಿ ಭೀಕರ ಅತ್ಯಾಚಾರ, ಕೊಲೆ ಪ್ರಕರಣ ವರದಿಯಾದ ಬೆನ್ನಲ್ಲೇ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದ್ದು, ಇನ್ನೊಬ್ಬನ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ತನಿಖೆಯ ಉದ್ದೇಶದಿಂದ ಆರೋಪಿಗಳ ಹೆಸರನ್ನು ಬಹಿರಂಗ ಪಡಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.  

Join Whatsapp