Home ಕರಾವಳಿ ಸುಳ್ಯ | ಅತ್ಯಾಚಾರ ಆರೋಪದಲ್ಲಿ ಗ್ರಾ.ಪಂ. ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪೊಲೀಸ್ ವಶಕ್ಕೆ

ಸುಳ್ಯ | ಅತ್ಯಾಚಾರ ಆರೋಪದಲ್ಲಿ ಗ್ರಾ.ಪಂ. ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪೊಲೀಸ್ ವಶಕ್ಕೆ

ಸುಳ್ಯ : ಇಲ್ಲಿನ ಕಲ್ಮಡ್ಕ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಬೆಂಬಲಿತ ಅಭ್ಯರ್ಥಿಯೋರ್ವನನ್ನು ಅತ್ಯಾಚಾರ ಆರೋಪದಲ್ಲಿ ಚುನಾವಣೆಗೆ ಮುನ್ನಾದಿನ ಶನಿವಾರ ಪೊಲೀಸರು ವಶಕ್ಕೆ ಪಡೆದ ಘಟನೆ ವರದಿಯಾಗಿದೆ.

ತನ್ನ ಸೋದರ ಸಂಬಂಧಿಯಾದ ಅಪ್ರಾಪ್ತ ವಯಸ್ಕ ಬಾಲಕಿಯ ಅತ್ಯಾಚಾರಗೈದ ಆರೋಪದಲ್ಲಿ ಬೆಳ್ಳಾರೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯೊಂದು ತಿಳಿಸಿದೆ.

ಕಲ್ಮಡ್ಕ ಗ್ರಾಮದ ವಾರ್ಡ್ – 1ರಿಂದ ಸ್ಪರ್ಧಿಸಿರುವ ಬಿಜೆಪಿ ಬೆಂಬಲಿತ ಅಭ್ಯರ್ಥಿ ಹುಕ್ರಪ್ಪ ಯಾನೆ ನಾರಾಯಣ ಪುಚ್ಚಮ ಎಂಬವರು ಪೊಲೀಸ್ ವಶಕ್ಕೆ ಒಳಗಾಗಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ.

ಆರೋಪಿಯು ಅಪ್ರಾಪ್ತ ವಯಸ್ಸಿನ ತನ್ನ ಚಿಕ್ಕಪ್ಪನ ಮಗಳನ್ನು ಅತ್ಯಾಚಾರ ಮಾಡಿರುವುದಾಗಿ ಹುಡುಗಿಯ ಮನೆಯವರು ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಂಧನ ಪ್ರಕ್ರಿಯೆ ಇನ್ನಷ್ಟೇ ನಡೆಯಬೇಕಾಗಿದೆ ಎಂದು ಪೊಲೀಸರು ತಿಳಿಸಿರುವುದಾಗಿ ವರದಿ ತಿಳಿಸಿದೆ.

Join Whatsapp
Exit mobile version