ನವದೆಹಲಿ: ನಟಿಯೊಬ್ಬರ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಟ ಸಿದ್ದಿಕ್ ಅವರಿಗೆ ಸುಪ್ರೀಂ ಕೋರ್ಟ್ ಇಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೇರಳ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿದ್ದಿಕ್ ಅವರ ಮನವಿಯ ಕುರಿತು ಸುಪ್ರೀಂ ಕೋರ್ಟ್ ಕೇರಳ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.