ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ವಿದ್ಯುತ್‌ ಕಂಬಕ್ಕೆ ಕಟ್ಟಿಹಾಕಿದ ದುಷ್ಕರ್ಮಿಗಳು

Prasthutha|

ಪಾಟ್ನಾ : ಬಿಹಾರದ ಸಮಷ್ಟಿಪುರದ ಚಖಾಬೀಬ್‌ ರುದಿಯಾ ಗ್ರಾಮದಲ್ಲಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಆಕೆಯನ್ನು ವಿದ್ಯುತ್‌ ಕಂಬಕ್ಕೆ ಕಟ್ಟಿಹಾಕಿ ಸಾಯಲು ಬಿಟ್ಟ ಘಟನೆ ನಡೆದಿದೆ. ಆದಾಗ್ಯೂ ಮಹಿಳೆ ಪ್ರಜ್ಞೆ ಕಳೆದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗ್ರಾಮಸ್ಥರು ಆಕೆಯನ್ನು ರಕ್ಷಿಸಿದ್ದಾರೆ.

- Advertisement -

ಮಹಿಳೆಯು ಮುಂಜಾನೆ ತೆರೆದ ಬಯಲಲ್ಲಿ ಶೌಚಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಆರೋಪಿಗಳು ಆಕೆಯನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಹೊತ್ತೊಯ್ದಿದ್ದರು. ಅತ್ಯಾಚಾರಕ್ಕೆ ನಿರಾಕರಿಸಿದಾಗ ಆಕೆಯ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಆಕೆಯನ್ನು ಹತ್ಯೆ ಮಾಡುವ ಬೆದರಿಕೆಯನ್ನೂ ಒಡ್ಡಿದ್ದರು.

ಮಹಿಳೆ ಪ್ರಜ್ಞಾಹೀನಳಾದಾಗ ಆಕೆಯನ್ನು ವಿದ್ಯುತ್‌ ಕಂಬವೊಂದಕ್ಕೆ ಕಟ್ಟಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗ್ರಾಮಸ್ಥರು ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಮಹಿಳೆ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಕೆ ಮಾತನಾಡುವ ಸ್ಥಿತಿಯಲ್ಲಿಲ್ಲ.   

Join Whatsapp