ಮಳವಳ್ಳಿ ಬಾಲಕಿಯ ಅತ್ಯಾಚಾರ, ಕೊಲೆ: ಕೋರ್ಟ್’ಗೆ ಚಾರ್ಜ್’ಶೀಟ್ ಸಲ್ಲಿಕೆ

Prasthutha|

ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆದ 10 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರಗತಿಯಲ್ಲಿ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್’ಶೀಟ್ ಸಲ್ಲಿಸಿದ್ದಾರೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

- Advertisement -

ಈ ಕುರಿತು ಟ್ವೀಟ್ ಮಾಡಿರುವ ಅವರು, ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ 10 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವು ಘಟನೆ ನಡೆದ 14 ದಿನಗಳಲ್ಲಿ ಚಾರ್ಜ್’ಶೀಟ್ ಆಗಿದೆ. ಇದಕ್ಕಾಗಿ ಮಂಡ್ಯ ಜಿಲ್ಲಾ ಪೊಲೀಸರಿಗೆ ಅಭಿನಂದನೆಗಳು. ತ್ವರಿತವಾಗಿ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನ ಮಾಡಲು ಬೆಂಬಲಿಸಿದ ಮಾನ್ಯ ಮುಖ್ಯಮಂತ್ರಿ ಬೊಮ್ಮಾಯಿ, ಗೃಹಸಚಿವ ಮತ್ತು ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ (Dgp) ಅವರಿಗೆ ಕೃತಜ್ಞತೆಗಳು ಎಂದು ತಿಳಿಸಿದ್ದಾರೆ.

Join Whatsapp