Home ಕರಾವಳಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ; 14 ಮಂದಿಯ ವಿರುದ್ಧ  ಪ್ರಕರಣ ದಾಖಲು

ಅಪ್ರಾಪ್ತೆಯ ಮೇಲೆ ಅತ್ಯಾಚಾರ; 14 ಮಂದಿಯ ವಿರುದ್ಧ  ಪ್ರಕರಣ ದಾಖಲು

ಸುಬ್ರಹ್ಮಣ್ಯ: 14 ವರ್ಷದ ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ಅತ್ಯಾಚಾರ ನಡೆಸಿರುವ ಘಟನೆ ಸುಬ್ರಮಣ್ಯದ ದೇವರಗದ್ದೆಯಲ್ಲಿ ನಡೆದಿದೆ. ಪ್ರಕರಣಕ್ಕೆ  ಸಂಬಂಧಿಸಿ ಮಹಿಳೆ ಸೇರಿದಂತೆ 14 ಮಂದಿಯ ಮೇಲೆ ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಾಲಕಿಯನ್ನು ಬೇರೆ ಬೇರೆ ದಿನಗಳಲ್ಲಾಗಿ ಹಲವು ಬಾರಿ ಅತ್ಯಾಚಾರಗೈಯ್ಯಲಾಗಿದೆ ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ.

ಆರೋಪದಡಿ ವೇದಾವತಿ, ವಿನೋದ್ ಮಣಿಯಾಣಿ, ಪ್ರವೀಣ್, ದಯಾನಂದ, ಹನುಮಂತ, ಆನಂದ, ಪ್ರದೀಪ, ಅಚ್ಚುತ, ಸತೀಶ್ ಗೌಡ, ಜಯಪ್ರಕಾಶ್, ಮಾಂಕು ಸೇರಿದಂತೆ 14 ಮಂದಿಯ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version