ತೆಲಂಗಾಣ: ಗನ್ ತೋರಿಸಿ ಮಹಿಳಾ ಹೆಡ್ ಕಾನ್ಸ್‌ಟೇಬಲ್ ಮೇಲೆ ಅತ್ಯಾಚಾರ ಮಾಡಿದ ಆರೋಪದಲ್ಲಿ ತೆಲಂಗಾಣದ ಪೊಲೀಸ್ ಇನ್ಸ್‌ಪೆಕ್ಟರ್ ಒಬ್ಬರನ್ನು ಪೊಲೀಸರು ಬಂಧಿಸಿದ್ದಾರೆ
ಘಟನೆ ತೆಲಂಗಾಣದ ಜಯಶಂಕರ ಭೂಪಲಪಲ್ಲಿ ಜಿಲ್ಲೆಯಲ್ಲಿ ನಡೆದಿದ್ದು, ಆರೋಪಿ ಕಾಲೇಶ್ವರಂ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದರು. ಅತ್ಯಾಚಾರಕ್ಕೊಳಗಾದ ಹೆಡ್ ಕಾನ್ಸ್‌ಟೇಬಲ್ ಕೂಡ ಅದೇ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಅತ್ಯಾಚಾರವೆಸಗಿ, ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಬೆದರಿಕೆಯೊಡ್ಡಿದ್ದಾನೆ ಎಂದು ಸಂತ್ರಸ್ತ ಮಹಿಳಾ ಪೊಲೀಸ್ ದೂರಿನಲ್ಲಿ ಹೇಳಿದ್ದಾರೆ.
ಜೂನ್ 15 ರಂದು ನೀರಾವರಿ ಇಲಾಖೆಗೆ ಸೇರಿದ ಅತಿಥಿಗೃಹದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಇಂದು ಆರೋಪಿಯ ಬಂಧನವಾಗಿದೆ.
ಘಟನೆಗೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆಯೆ ಸಂಬಂಧಿತ ಸೆಕ್ಷನ್‌ಗಳ ಅಡಿ ಎಸ್‌ಐ ವಿರುದ್ಧ ದೂರು ದಾಖಲಾಗಿದೆ. ಸತ್ಯ ಏನೆಂದು ನಾವು ತನಿಖೆ ಮಾಡುತ್ತೇವೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಆರೋಪಿಯ ಹೆಸರನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.