ನಟ ದರ್ಶನ್ ಫಾರ್ಮ್ ಹೌಸ್ ನಲ್ಲಿ ಬಾಲಕಿಯ ಮೇಲೆ ಅತ್ಯಾಚಾರ

Prasthutha|

ಮೈಸೂರು: ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್‌ ರವರ ಫಾರಂ ಹೌಸ್‌ ನಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

- Advertisement -

ಟಿ. ನರಸೀಪುರ ರಸ್ತೆಯಲ್ಲಿರುವ ಫಾರಂ ಹೌಸ್‌ ನಲ್ಲಿ ಕೆಲಸ‌ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಕುಟುಂಬವೊಂದರ ಬಾಲಕಿಯ ಮೇಲೆ ಸೆ.13ರಂದು ಸೋಮವಾರ ರಾತ್ರಿ ಈ ಹೇಯ ಕೃತ್ಯ ನಡೆದಿದೆ. ಅದೇ ತೋಟದಲ್ಲಿ ಕುದುರೆಗೆ ಲಾಳ ಹೊಡೆಯುವ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ಅತ್ಯಾಚಾರ ನಡೆಸಿದ್ದು ಎಂಬುದು ಗೊತ್ತಾಗಿದೆ.

ಮೈಸೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಅತ್ಯಾಚಾರ ನಡೆದಿರುವ ಬಗ್ಗೆ ಯಾರಿಗೂ ಹೇಳದಂತೆ ಆರೋಪಿಯು ಯುವತಿಗೆ ಬೆದರಿಕೆ ಹಾಕಿದ್ದನು. ಸೆಪ್ಟೆಂಬರ್ 13ರಂದು ನಡೆದಿರುವ ಘಟನೆ ಕುರಿತು ನಾಲ್ಕು ದಿನಗಳ ನಂತರ ಗೊತ್ತಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೋಷಕರು ಆರೋಪಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

- Advertisement -

ನಟ ದರ್ಶನ್ ಮಾಲೀಕತ್ವದ ಫಾರ್ಮ್ ಹೌಸ್‌ ನಲ್ಲಿ ಬಾಲಕಿಯ ಮೇಲೆ ನಡೆದಿರುವ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 16ರಂದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ

Join Whatsapp