ಅತ್ಯಾಚಾರಕ್ಕೊಳಗಾದ ಮಹಿಳೆಯ ಕೂದಲು ಕತ್ತರಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ: ನಾಲ್ವರ ಬಂಧನ !

Prasthutha|

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅತ್ಯಾಚಾರಕ್ಕೊಳಗಾದ ಮಹಿಳೆಯ ಕೂದಲು ಕತ್ತರಿಸಿ, ಚಪ್ಪಲಿ ಹಾರ ಹಾಕಿ ಮೆರವಣಿ ನಡೆಸಿದ ಆಘಾತಕಾರಿ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

- Advertisement -

ಪೂರ್ವ ದೆಹಲಿಯ ಶಹದಾರಾದಲ್ಲಿ ಈ ಘಟನೆ ನಡೆದಿದ್ದು, “ವೈಯಕ್ತಿಕ ದ್ವೇಷ”ದಿಂದ ನಡೆಸಲಾಗಿದೆ. ಸಂತ್ರಸ್ತೆಗೆ ಸಾಧ್ಯವಿರುವ ಎಲ್ಲ ಸಹಾಯ ಮತ್ತು ಸಮಾಲೋಚನೆಯನ್ನು ಒದಗಿಸಲಾಗುತ್ತಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಸಂತ್ರಸ್ತ ಮಹಿಳೆಯನ್ನು ಭೇಟಿಯಾದ ಡಿಸಿಡಬ್ಲ್ಯು ಅಧ್ಯಕ್ಷೆ ಸ್ವಾತಿ ಮಲಿವಾಲ್ 20 ವರ್ಷದ ಮಹಿಳೆಯ ಮೇಲೆ ಅಕ್ರಮ ಮದ್ಯ ಮಾರಾಟಗಾರರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.



Join Whatsapp