ಅತ್ಯಾಚಾರಿ ಗುರ್ಮೀತ್ ಸಿಂಗ್ ಕಾರ್ಯಕ್ರಮದಲ್ಲಿ ವೇದಿಕೆ ಹಂಚಿಕೊಂಡ ಬಿಜೆಪಿ ನಾಯಕರು

Prasthutha|

ಸಿರ್ಸಾ (ಹರಿಯಾಣ): ತನ್ನ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಡಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಗುರ್ಮೀತ್ ಸಿಂಗ್ ಪೆರೋಲ್‌ನಡಿ ಜೈಲಿನಿಂದ ಹೊರಬಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಕೆಲವು ಹಿರಿಯ ಬಿಜೆಪಿ ನಾಯಕರು ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ.

- Advertisement -

ಹರಿಯಾಣ ಮತ್ತು ಇತರ ಕೆಲವು ರಾಜ್ಯಗಳಲ್ಲಿ ಸ್ವಯಂಸೇವಕರು ಸೋಮವಾರ ಆಯೋಜಿಸಿದ್ದ ಬೃಹತ್ ಸ್ವಚ್ಛತಾ ಅಭಿಯಾನದಲ್ಲಿ ಪೆರೋಲ್‌’ನಲ್ಲಿ ಜೈಲಿನಿಂದ ಹೊರಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದಲ್ಲಿ ರಾಜ್ಯಸಭಾ ಸಂಸದ ಕ್ರಿಶನ್ ಲಾಲ್ ಪನ್ವಾರ್ ಮತ್ತು ಮಾಜಿ ಸಚಿವ ಕ್ರಿಶನ್ ಕುಮಾರ್ ಬೇಡಿ ಮುಂತಾದ ಕೆಲವು ಹಿರಿಯ ಬಿಜೆಪಿ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರಸ್ತುತ ಪೆರೋಲ್‌ನಲ್ಲಿ ಜೈಲಿನಿಂದ ಹೊರಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್, ಹರಿಯಾಣ ಮತ್ತು ಇತರ ಕೆಲವು ರಾಜ್ಯಗಳಲ್ಲಿ ತಮ್ಮ ಪಂಥದ ಸ್ವಯಂಸೇವಕರು ಸೋಮವಾರ ಆಯೋಜಿಸಿದ್ದ ಬೃಹತ್ ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾಗಿದ್ದರು. ರಾಜ್ಯಸಭಾ ಸಂಸದ ಕ್ರಿಶನ್ ಲಾಲ್ ಪನ್ವಾರ್ ಮತ್ತು ಮಾಜಿ ಸಚಿವ ಕ್ರಿಶನ್ ಕುಮಾರ್ ಬೇಡಿ ಸೇರಿದಂತೆ ಹರಿಯಾಣದ ಕೆಲವು ಹಿರಿಯ ಬಿಜೆಪಿ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Join Whatsapp