‘ಅಭಿವೃದ್ಧಿಗೆ ಮತ ಹಾಕಿ’ ಎಂದ ನಟಿ ರಶ್ಮಿಕಾ ಮಂದಣ್ಣ: ರೀಟ್ವೀಟ್ ಮಾಡಿದ ಮೋದಿ

Prasthutha|

ಮುಂಬೈ: ಇತ್ತೀಚೆಗೆ ನಟಿ ರಶ್ಮಿಕಾ ಮಂದಣ್ಣ ಅವರು ಮುಂಬೈನ ಅಟಲ್ ಸೇತುವೆ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ವಿಡಿಯೊ ಹಂಚಿಕೊಂಡಿದ್ದರು. ಈ ಟ್ವೀಟ್ ಅನ್ನು ಪ್ರಧಾನಿ ನರೇಂದ್ರ ಮೋದಿ ರೀಟ್ವೀಟ್ ಮಾಡಿದ್ದಾರೆ.

- Advertisement -

ಭಾರತದ ಅತ್ಯಂತ ಉದ್ದನೆಯ ಸಮುದ್ರ ಸೇತುವೆ ಎನ್ನುವ ಖ್ಯಾತಿ ಅಟಲ್ ಸೇತುಗೆ ಇದೆ. ಮುಂಬೈ ಹಾಗೂ ನವಿ ಮುಂಬೈನ ಇದು ಕನೆಕ್ಟ್ ಮಾಡುತ್ತದೆ. ಈ ಬಗ್ಗೆ ರಶ್ಮಿಕಾ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಈ ಬಗ್ಗೆ ಮಾತನಾಡಿರುವ ರಶ್ಮಿಕಾ, ‘ಭಾರತದ ಅತಿ ಉದ್ದನೆಯ ಸಮುದ್ರ ಬ್ರಿಜ್. 22 ಕಿಲೋಮೀಟರ್ ಉದ್ದ ಇದೆ. ಎರಡು ಗಂಟೆಗಳ ಪ್ರಯಾಣ ಈಗ 20 ನಿಮಿಷಗಳಲ್ಲಿ ಮುಗಿಯುತ್ತದೆ. ನಂಬಲೂ ಅಸಾಧ್ಯ. ಕೆಲ ವರ್ಷಗಳ ಹಿಂದೆ ಯಾರೂ ಇದನ್ನು ಊಹಿಸಿಯೂ ಇರಲಿಲ್ಲ’ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ.

‘ಭಾರತ ದೊಡ್ಡದಾಗಿ ಕನಸು ಕಾಣಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದರು. ಆದರೆ, ಏಳೇ ವರ್ಷಗಳಲ್ಲಿ ಈ ದೊಡ್ಡ ಬ್ರಿಡ್ಜ್ ನಿರ್ಮಾಣ ಮಾಡಿದ್ದೇವೆ. ಅಟಲ್ ಸೇತು ಇದು ಕೇವಲ ಸೇತುವೆ ಅಲ್ಲ, ಯುವ ಭಾರತಕ್ಕೆ ಇದು ಗ್ಯಾರಂಟಿ. ಈ ರೀತಿಯ ನೂರು ಅಟಲ್ ಸೇತುವೆ ಸ್ಥಾಪಿಸಬೇಕು ಎಂದರೆ ಅಭಿವೃದ್ಧಿಗೆ ಮತ ಹಾಕಿ’ ಎಂದು ರಶ್ಮಿಕಾ ಹೇಳಿದ್ದಾರೆ. ಇದನ್ನು ರೀಟ್ವೀಟ್ ಮಾಡಿದ ಮೋದಿ ಮೋದಿ, ‘ಜನರನ್ನು ಸಂಪರ್ಕಿಸುವುದು ಮತ್ತು ಜೀವನವನ್ನು ಸುಧಾರಿಸುವುದಕ್ಕಿಂತ ಹೆಚ್ಚು ತೃಪ್ತಿಕರವಾದುದ್ದು ಬೇರೆನೂ ಇಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

- Advertisement -

Join Whatsapp
Exit mobile version