Home ಟಾಪ್ ಸುದ್ದಿಗಳು ರಾಷ್ಟ್ರಪತಿ ಭವನದ ದರ್ಬಾರ್, ಅಶೋಕ್ ಹಾಲ್‌ ಮರುನಾಮಕರಣ: ಪ್ರಿಯಾಂಕಾ ಗಾಂಧಿ ಆಕ್ರೋಶ

ರಾಷ್ಟ್ರಪತಿ ಭವನದ ದರ್ಬಾರ್, ಅಶೋಕ್ ಹಾಲ್‌ ಮರುನಾಮಕರಣ: ಪ್ರಿಯಾಂಕಾ ಗಾಂಧಿ ಆಕ್ರೋಶ

ದೆಹಲಿ: ರಾಷ್ಟ್ರಪತಿ ಭವನದ ದರ್ಬಾರ್ ಮತ್ತು ಅಶೋಕ್ ಹಾಲ್‌ಗಳ ಮರುನಾಮಕರಣದ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ದೇಶದಲ್ಲಿ ಶಹೆನ್‌ಶಾ (ರಾಜ) ಪರಿಕಲ್ಪನೆಯು ಇನ್ನೂ ಅಸ್ತಿತ್ವದಲ್ಲಿದೆ ಎಂದು ಹೇಳಿದ್ದಾರೆ. ದರ್ಬಾರ್ ಪರಿಕಲ್ಪನೆ ಇಲ್ಲ ಆದರೆ ಶಹೆನ್‌ಶಾ ಪರಿಕಲ್ಪನೆ ಇದೆ ಎಂದು ಹೇಳಿದರು.

ರಾಷ್ಟ್ರಪತಿ ಭವನದ ಎರಡು ಪ್ರಮುಖ ಸಭಾಂಗಣಗಳಾದ ದರ್ಬಾರ್ ಹಾಲ್ ಮತ್ತು ಅಶೋಕ್ ಹಾಲ್ ಅನ್ನು ಕ್ರಮವಾಗಿ ಗಣತಂತ್ರ ಮಂಟಪ ಮತ್ತು ಅಶೋಕ್ ಮಂಟಪ ಎಂದು ಮರುನಾಮಕರಣ ಮಾಡಲಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಘೋಷಿಸಿದರು. ವಸಾಹತುಶಾಹಿ ಪರಂಪರೆಯನ್ನು ಪ್ರತಿಬಿಂಬಿಸುವ ಸಭಾಂಗಣಗಳ ಹೆಸರುಗಳನ್ನು ಬದಲಿಸಲು ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.

ಮರುನಾಮಕರಣವು “ರಾಷ್ಟ್ರಪತಿ ಭವನದ ವಾತಾವರಣವನ್ನು ಭಾರತೀಯ ಸಾಂಸ್ಕೃತಿಕ ಮೌಲ್ಯಗಳು ಮತ್ತು ನೈತಿಕತೆಯನ್ನು ಪ್ರತಿಬಿಂಬಿಸುವ ನಿರಂತರ ಪ್ರಯತ್ನದ” ಭಾಗವಾಗಿದೆ ಎಂದು ರಾಷ್ಟ್ರಪತಿಯವರ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

Join Whatsapp
Exit mobile version