RSS ಗೆ ಸಡ್ಡು: ಇಂದು ರಾಷ್ಟ್ರೀಯ ದ್ರಾವಿಡ ಸಂಘ ಉದ್ಘಾಟನೆ

Prasthutha|

ಬೆಂಗಳೂರು: RSS ವಿರುದ್ಧ ಜಾಗೃತಿ ಮೂಡಿಸಲು ಇಂದು(ಜನವರಿ 12) ‘ರಾಷ್ಟ್ರೀಯ ದ್ರಾವಿಡ ಸಂಘ’ವನ್ನು ಉದ್ಘಾಟಿಸಲಾಗುವುದು ಎಂದು ಹೋರಾಟಗಾರ ಅಗ್ನಿ ಶ್ರೀಧರ್ ತಿಳಿಸಿದ್ದಾರೆ.

- Advertisement -

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಮಹಾರಾಣಿ ಕಾಲೇಜು ಪಕ್ಕದ ಭಾರತ್ ಸ್ಕೌಟ್‌ ಮತ್ತು ಗೈಡ್ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮವನ್ನು ಕಾಂಗ್ರೆಸ್ ನಾಯಕ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಉದ್ಘಾಟಿಸಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಚಿಂತಕರಾದ ಬಂಜಗೆರೆ ಜಯಪ್ರಕಾಶ್ ಪ್ರಸ್ತಾವಿಕವಾಗಿ ಮಾತನಾಡಲಿದ್ದಾರೆ. ಜಾಗತಿಕ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಕಾರ್ಯದರ್ಶಿ ಜಿ.ಬಿ.ಪಾಟೀಲ್, ಚಿತ್ರ ಸಾಹಿತಿ ಕವಿರಾಜ್‌, ಕ್ರಿಕೆಟ್‌ ಪಟು ವೇದ ಕೃಷ್ಣಮೂರ್ತಿ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

- Advertisement -

ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ನಾಡಿನಲ್ಲಿ ಹಿಂದಿ ಹೇರಿಕೆ, ಆರ್ಯ ಸಂಸ್ಕೃತಿಯ ಪ್ರಭಾವ ಹೆಚ್ಚಾಗಿದೆ. ಇದರಿಂದ ಕನ್ನಡ ಭಾಷೆಯ ಜೊತೆಗೆ ಈ ನೆಲದ ಸಂಸ್ಕೃತಿಯು ಅಳಿದುಹೋಗುತ್ತಿದೆ ಎನ್ನುವ ಕಾರಣಕ್ಕೆ ಸಂಘವನ್ನು ತೆರೆಯಲಾಗುತ್ತಿದೆ. ಇಂದು ನಾವು ಸಂದಿಗ್ಧ ಪರಿಸ್ಥಿತಿಯಲ್ಲಿದ್ದೇವೆ. ದೇಶ ಸಾಗುತ್ತಿರುವ ಹಾದಿ ಯಾರಲ್ಲೂ ಭರವಸೆ ಮೂಡಿಸಿಲ್ಲ. ಆರ್‌ಎಸ್ಎಸ್ ಎನ್ನುವ ರಾಷ್ಟ್ರೀಯ ಸನಾತನ ಸಂಘ ನಮ್ಮನ್ನೆಲ್ಲಾ ಶಾಶ್ವತವಾಗಿ ಗುಲಾಮಗಿರಿಗೆ ದೂಡುತ್ತಿದೆ. ಈ ನೆಲದ ಜನರ ಜೀವನ ಶೈಲಿಯನ್ನೇ ಬದಲಾಯಿಸುತ್ತಿದೆ. ಧರ್ಮದ ಹೆಸರಿನಲ್ಲಿ ಜಾತೀಯತೆಯನ್ನು ಜೀವಂತವಾಗಿಡುವ ಪ್ರಯತ್ನ ನಡೆಸುತ್ತಿದೆ. ದ್ರಾವಿಡರ ಆಹಾರ ಸಂಸ್ಕೃತಿಯನ್ನು ಹಾಳುಗೆಡವಲು ಮೇಲು-ಕೀಳು ಎನ್ನುವ ವಿಚಾರವನ್ನು ಜನರ ಮನಸ್ಸಿನಲ್ಲಿ ತುಂಬಲಾಗುತ್ತಿದೆ ಎಂದು ಸಂಘಟಕರು ತಿಳಿಸಿದ್ದಾರೆ.  



Join Whatsapp