ಡಿಸಿ, ಸಿಇಓ, ಕಮಿಷನರ್’ಗಳಿಗೆ ರೇಟ್ ಫಿಕ್ಸ್ ಆಗಿದೆ: ನಳಿನ್ ಕುಮಾರ್ ಆರೋಪ

Prasthutha|

ಬೆಳಗಾವಿ: ರಾಜ್ಯದಲ್ಲಿ ಡಿಸಿ, ಸಿಇಓ ಹಾಗೂ ಕಮಿಷನರ್ಗಳಿಗೆ ರೇಟ್ ಫಿಕ್ಸ್ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗಂಭೀರ ಆರೋಪ ಮಾಡಿದ್ದಾರೆ.

- Advertisement -


ಬೆಳಗಾವಿ ಪೊಲೀಸ್ ಕಮಿಷನರ್ ನೇಮಕವಾಗದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಡಿಸಿಗಳಿಗೆ, ಸಿಇಓಗಳಿಗೆ, ಕಮಿಷನರ್ ಗಳಿಗೆ ರೇಟ್ ಫಿಕ್ಸ್ ಆಗಿದೆ. ರೇಟ್ ಕುದುರುವವರೆಗೂ ಯಾರು ನೇಮಕ ಆಗಲ್ಲ ಎಂದರು. ಅಲ್ಲದೇ ಸರ್ಕಾರಕ್ಕೆ ನಾಚಿಕೆ ಆಗಬೇಕು. ಇಂತಹ ಪ್ರದೇಶದಲ್ಲಿ ಕಮಿಷನರ್ ನೇಮಕ ಆಗದೇ ಇರೋದು ನಾಚಿಕ ವಿಷಯವಾಗಿದೆ. ಹೀಗಾದ್ರೆ ಕಾನೂನು ಸುವ್ಯವಸ್ಥೆ ಏನಾಗಬಹುದು. ಕಾನೂನು ಸುವ್ಯವಸ್ಥೆ ಕಾಪಾಡೊದು ಹೇಗೆ?. ರಾಜ್ಯದ ಅಭಿವೃದ್ಧಿ, ಶಾಂತಿ ಚಿಂತನೆ ಮಾಡುವುದುದು ಬಿಟ್ಟು ಇಂತಹ ವ್ಯವಹಾರದಲ್ಲಿ ಕುಳಿತಿದೆ. ಜನರ ಅಭಿವೃದ್ಧಿ ಬಗ್ಗೆ ಚಿಂತನೆ ಇಲ್ಲ, ಲೋಕಸಭೆ ಚುನಾವಣೆ ಈ ರೀತಿ ಮಾಡ್ತಿದ್ದಾರೆ. 5 ವರ್ಷ ಸರ್ಕಾರ ನಡೆಸುತ್ತೇವೆ ಅಂತಾ ವಿಶ್ವಾಸವಿಲ್ಲ, ಈಗಲೇ ತುಂಬಿಕೊಳ್ಳುವ ವ್ಯವಸ್ಥೆ ಮಾಡುತ್ತಿದ್ದಾರೆ ಎಂದರು.