ಪಡಿತರ ಚೀಟಿ ರದ್ದು | ಕೇಂದ್ರ, ರಾಜ್ಯಗಳ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್

Prasthutha|

ಹೊಸದಿಲ್ಲಿ : ಆಧಾರ್ ಕಾರ್ಡ್ ಗೆ ಲಿಂಕ್ ಮಾಡದ ಕಾರಣ ಕೇಂದ್ರ ಸರ್ಕಾರ ಸುಮಾರು ಮೂರು ಕೋಟಿ ಪಡಿತರ ಚೀಟಿಗಳನ್ನು ರದ್ದು ಮಾಡಿರುವ ಆರೋಪದ ಬಗ್ಗೆ ಸುಪ್ರೀಂ ಕೋರ್ಟ್ ಬುಧವಾರ ಗಂಭೀರ ಚಿಂತನೆ ನಡೆಸಿ, ಈ ಬಗ್ಗೆ ಕೇಂದ್ರ ಸರ್ಕಾರ ಮತ್ತು ಎಲ್ಲ ರಾಜ್ಯಗಳಿಂದ ಪ್ರತಿಕ್ರಿಯೆ ಕೇಳಿದೆ.

ಮುಖ್ಯ ನ್ಯಾಯಮೂರ್ತಿ ಎಸ್ ಎ ಬೋಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರನ್ನೊಳಗೊಂಡ ಪೀಠ, ಈ ವಿಷಯವನ್ನ ಅತ್ಯಂತ ಗಂಭೀರ ವಿಷಯವೆಂದು ಪರಿಗಣಿಸಿದೆ. ಮಾತ್ರವಲ್ಲದೆ ಹೀಗಾಗಿರುವುದು ದುರದೃಷ್ಟಕರ ಎಂದು ಸುಮ್ಮನಾಗಲು ಸಾಧ್ಯವಿಲ್ಲ ಎಂದು ಹೇಳಿದೆ.

- Advertisement -

ಈ ಪ್ರಕರಣದ ಅಂತಿಮ ವಿಚಾರಣೆ ನಡೆಯಲಿದೆ ಎಂದು ನ್ಯಾಯಪೀಠ ಹೇಳಿದ್ದು, ಪಡಿತರ ಚೀಟಿ ರದ್ದು ಆರೋಪದ ಕುರಿತು ನಾಲ್ಕು ವಾರದೊಳಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ. ಇನ್ನು ಹಿರಿಯ ವಕೀಲ ಕೊಲಿನ್ ಗೊನ್ಸಾಲ್ವೆಸ್, ಅರ್ಜಿದಾರ ಕೊಯಿಲಿ ದೇವಿ ಅವರ ಪರವಾಗಿ ವಾದ ಮಂಡಿಸಿದರು.

- Advertisement -