Home ಟಾಪ್ ಸುದ್ದಿಗಳು ಪಡಿತರ ಚೀಟಿ ರದ್ದು | ಕೇಂದ್ರ, ರಾಜ್ಯಗಳ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್

ಪಡಿತರ ಚೀಟಿ ರದ್ದು | ಕೇಂದ್ರ, ರಾಜ್ಯಗಳ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್

ಹೊಸದಿಲ್ಲಿ : ಆಧಾರ್ ಕಾರ್ಡ್ ಗೆ ಲಿಂಕ್ ಮಾಡದ ಕಾರಣ ಕೇಂದ್ರ ಸರ್ಕಾರ ಸುಮಾರು ಮೂರು ಕೋಟಿ ಪಡಿತರ ಚೀಟಿಗಳನ್ನು ರದ್ದು ಮಾಡಿರುವ ಆರೋಪದ ಬಗ್ಗೆ ಸುಪ್ರೀಂ ಕೋರ್ಟ್ ಬುಧವಾರ ಗಂಭೀರ ಚಿಂತನೆ ನಡೆಸಿ, ಈ ಬಗ್ಗೆ ಕೇಂದ್ರ ಸರ್ಕಾರ ಮತ್ತು ಎಲ್ಲ ರಾಜ್ಯಗಳಿಂದ ಪ್ರತಿಕ್ರಿಯೆ ಕೇಳಿದೆ.

ಮುಖ್ಯ ನ್ಯಾಯಮೂರ್ತಿ ಎಸ್ ಎ ಬೋಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರನ್ನೊಳಗೊಂಡ ಪೀಠ, ಈ ವಿಷಯವನ್ನ ಅತ್ಯಂತ ಗಂಭೀರ ವಿಷಯವೆಂದು ಪರಿಗಣಿಸಿದೆ. ಮಾತ್ರವಲ್ಲದೆ ಹೀಗಾಗಿರುವುದು ದುರದೃಷ್ಟಕರ ಎಂದು ಸುಮ್ಮನಾಗಲು ಸಾಧ್ಯವಿಲ್ಲ ಎಂದು ಹೇಳಿದೆ.

ಈ ಪ್ರಕರಣದ ಅಂತಿಮ ವಿಚಾರಣೆ ನಡೆಯಲಿದೆ ಎಂದು ನ್ಯಾಯಪೀಠ ಹೇಳಿದ್ದು, ಪಡಿತರ ಚೀಟಿ ರದ್ದು ಆರೋಪದ ಕುರಿತು ನಾಲ್ಕು ವಾರದೊಳಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ. ಇನ್ನು ಹಿರಿಯ ವಕೀಲ ಕೊಲಿನ್ ಗೊನ್ಸಾಲ್ವೆಸ್, ಅರ್ಜಿದಾರ ಕೊಯಿಲಿ ದೇವಿ ಅವರ ಪರವಾಗಿ ವಾದ ಮಂಡಿಸಿದರು.

Join Whatsapp
Exit mobile version