ರೇಷನ್ ಕಾರ್ಡ್‌ದಾರರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರವು ಗಂಭೀರವಾದ ಎಚ್ಚರಿಕೆಯೊಂದನ್ನು ಕೊಟ್ಟಿದೆ. ನೀವೇನಾದರೂ ಈ ತಪ್ಪು ಮಾಡಿದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದೆ ಎನ್ನುವ ಎಚ್ಚರಿಕೆಯನ್ನು ಕೊಡಲಾಗಿದೆ. ರಾಜ್ಯದಲ್ಲಿ ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ ಗೆ ಸಂಬಂಧಿಸಿದಂತೆ ಮತ್ತೊಂದು ಕಠಿಣ ಕ್ರಮವನ್ನು ತೆಗೆದುಕೊಳ್ಳುವುದಕ್ಕೆ ರಾಜ್ಯ ಸರ್ಕಾರವು ಮುಂದಾಗಿದೆ. ಅನ್ನಭಾಗ್ಯ ಯೋಜನೆಯ ಗುಡ್ ನ್ಯೂಸ್ ಬೆನ್ನಲ್ಲೇ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಎಚ್ಚರಿಕೆ ನೀಡಲಾಗಿದೆ. ಅದೇನು ಎನ್ನುವ ವಿವರ ಇಲ್ಲಿದೆ.
ಕರ್ನಾಟಕದಲ್ಲಿ ರಾಜ್ಯ ಸರ್ಕಾರವು ರೇಷನ್ ಕಾರ್ಡ್‌ಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ರಾಜ್ಯದಲ್ಲಿ ಮತ್ತೆ ರೇಷನ್ ಕಾರ್ಡ್ ಗಳನ್ನು ಪರಿಷ್ಕರಣೆ ಮಾಡುವುದಾಗಿಯು ರೇಷನ್ ಕಾರ್ಡ್ ಇರುವವರು ಇದಕ್ಕೆ ಸಹಕಾರ ನೀಡಬೇಕು ಎಂದು ಸಚಿವ ಕೆ.ಎಚ್ ಮುನಿಯಪ್ಪ ಅವರು ಹೇಳಿದ್ದರು. ಇದೀಗ ಮತ್ತೊಂದು ಗಂಭೀರ ಕ್ರಮವನ್ನು ರಾಜ್ಯ ಕಾಂಗ್ರೆಸ್ ಸರ್ಕಾರವು ತೆಗೆದುಕೊಂಡಿದೆ.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಅನ್ವಯ ವಿತರಿಸಲಾಗುವ ಕೇಂದ್ರ ಸರ್ಕಾರದ 5 ಕೆ.ಜಿ ಅಕ್ಕಿಯೊಂದಿಗೆ ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿಯ ಬದಲಾಗಿ ಪ್ರತಿ ಕೆ.ಜಿಗೆ 34 ರೂ. ಯಂತೆ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿ.ಬಿ.ಟಿ ಮೂಲಕ 170 ರೂ. ವರ್ಗಾಯಿಸಲಾಗುತ್ತಿತ್ತು. 2025 ರ ಫೆಬ್ರವರಿ ತಿಂಗಳ ವಿತರಣೆಯು ಪೂರ್ಣಗೊಂಡಿರುವುದರಿಂದ ಈ ತಿಂಗಳ ಹೆಚ್ಚುವರಿ ಅಕ್ಕಿ ಮಾರ್ಚ್ ತಿಂಗಳ ಹಂಚಿಕೆಯೊಂದಿಗೆ ವಿತರಣೆ ಮಾಡಲಾಗುವುದು. ಆದ್ದರಿಂದ ಮಾರ್ಚ್ ತಿಂಗಳಲ್ಲಿನ ಆದ್ಯತಾ ಪಡಿತರ ಚೀಟಿಯಲ್ಲಿನ ಪ್ರತಿ ಫಲಾನುಭವಿಗಳಿಗೆ ಒಟ್ಟು 15 ಕೆ.ಜಿ ಅಕ್ಕಿ ವಿತರಣೆ ಮಾಡಲಾಗುವುದು. ಹಾಗೆಯೇ 4 ಸದಸ್ಯರಕ್ಕಿಂತ ಕಡಿಮೆ ಇರುವ ಅಂತ್ಯೋದಯ ಪಡಿತರ ಚೀಟಿದಾರರಿಗೆ 35 ಕೆ.ಜಿ ಅಕ್ಕಿ ವಿತರಣೆ ಮಾಡಲಾಗುತ್ತದೆ.
ಆದರೆ, ಕೆಲವು ರೇಷನ್ ಕಾರ್ಡ್‌ದಾರರು ಅಕ್ಕಿಯನ್ನು ಅನ್ಯ ಉದ್ದೇಶಕ್ಕೆ ಬಳಸಿಕೊಳ್ಳುತ್ತಿರುವ ವಿಷಯ ಸರ್ಕಾರದ ಗಮನಕ್ಕೆ ಬಂದಿದ್ದು. ಇದೀಗ ಸಂಬಧಪಟ್ಟವರ ಮೇಲೆ ಕ್ರಮಕ್ಕೆ ನಿರ್ಧರಿಸಲಾಗಿದೆ.ಕೆಲವು ರೇಷನ್ ಕಾರ್ಡ್‌ದಾರರು ಅವರಿಗೆ ನೀಡುವ ಆಹಾರ ಧಾನ್ಯಗಳನ್ನು ಕಾಸಿಗೆ ಮಾರಾಟ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು. ಈ ವಿಷಯವನ್ನು ರಾಜ್ಯ ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಅನಧಿಕೃತವಾಗಿ ಕಾಳಸಂತೆಯಲ್ಲಿ ಆಹಾರಧಾನ್ಯ ಸಂಗ್ರಹಿಸುವುದು ಹಾಗೂ ಮಾರಾಟ ಮಾಡುವವರ ಮೇಲೆ ಕ್ರಮಕ್ಕೆ ನಿರ್ಧರಿಸಲಾಗಿದ್ದು.
ಈ ರೀತಿ ನಿಯಮ ಉಲ್ಲಂಘನೆ ಮಾಡಿದರೆ ರೇಷನ್ ಕಾರ್ಡ್‌ಗಳನ್ನೇ ರದ್ದು ಮಾಡಲಾಗುವುದು. ಅಲ್ಲದೆ ಈ ರೀತಿ ಮಾಡುವವರ ಮೇಲೆ ಅಗತ್ಯ ವಸ್ತುಗಳ ಕಾಯ್ದೆಯ ಅಡಿಯಲ್ಲಿ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ. ರೇಷನ್ ಕಾರ್ಡ್‌ನಿಂದ ಸಿಗುವ ಅಕ್ಕಿಯನ್ನು ಕೆಲವರು ದುಡ್ಡಿಗೆ ಮಾರಾಟ ಮಾಡುತ್ತಿರುವುದನ್ನು ಸರ್ಕಾರ ಗಮನಿಸಿದ್ದು ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ.
ಇನ್ನು ಸರ್ಕಾರವು ಬಿಪಿಎಲ್ ಕಾರ್ಡ್‌ಗಳನ್ನು ಪರಿಷ್ಕರಣೆಗೆ ಒಳಪಡಿಸುವುದಾಗಿ ಹೇಳಿದೆ. ಮತ್ತೆ ರಾಜ್ಯದಲ್ಲಿ ರೇಷನ್ ಕಾರ್ಡ್‌ಗಳ ಪರಿಷ್ಕರಣೆಯನ್ನು ಕೇಂದ್ರ ಸರ್ಕಾರದ ಮಾನದಂಡಗಳ ಆಧಾರದ ಮೇಲೆಯೇ ಮಾಡಲಾಗುವುದು. ಹೀಗಾಗಿ, ರಾಜ್ಯದಲ್ಲಿ ರೇಷನ್ ಕಾರ್ಡ್ ಹೊಂದಿರುವವರು ಇದಕ್ಕೆ ಸಹಕಾರ ನೀಡಬೇಕು ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರು ಹೇಳಿದ್ದಾರೆ.