ಬೆಂಗಳೂರು: ಇಂದಿನಿಂದ ರೇಷನ್ ಕಾರ್ಡ್ ತಿದ್ದುಪಡಿಗೆ ಕಾಲಾವಕಾಶ ನೀಡಲಾಗಿದ್ದು, ಪಡಿತರ ಚೀಟಿದಾರರು ಪಡಿತರ ಚೀಟಿಯಲ್ಲಿನ ವಿವರಗಳಲ್ಲಿ ಯಾವುದೇ ತಪ್ಪು ಕಂಡುಬಂದಲ್ಲಿ ವಿವರಗಳನ್ನು ಸರಿಪಡಿಸಿಕೊಳ್ಳಬಹುದಾಗಿದೆ.
ಬಿಪಿಎಲ್ ದಾರರಿಗೆ ಹೊಸ ಸಂಕಷ್ಟ ಎದುರಾಗಿದೆ. ಬಿಪಿಎಲ್ ಕಾರ್ಡ್ ನಲ್ಲಿ ಪುರುಷರು ಮುಖ್ಯಸ್ಥರಾಗಿದ್ದರಿಂದ ಮಹಿಳೆಯರಿಗೆ ಸರ್ಕಾರ ನೀಡುತ್ತಿರುವ 2000 ರೂ. ಗೃಹಲಕ್ಷ್ಮೀ ಯೋಜನೆಯಿಂದ ವಂಚಿತರಾಗಿದ್ದಾರೆ. ಇದೀಗ ಸರ್ಕಾರ, ಮನೆ ಮುಖ್ಯಸ್ಥರ ಹೆಸರು ಬದಲಾವಣೆಗೆ ಇಂದಿನಿಂದ (ಸೆಪ್ಟೆಂಬರ್ 01) ಅವಕಾಶ ನೀಡಿದೆ.
ಪಡಿತರ ಚೀಟಿಯ ತಪ್ಪುಗಳನ್ನು ತಿದ್ದುಪಡಿ ಮಾಡಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾದ ಅವಕಾಶ ಒದಗಿ ಬಂದಿದೆ.ರೇಷನ್ ಕಾರ್ಡ್ನಲ್ಲಿ ಹೆಸರು ಬದಲಾವಣೆ, ಆಧಾರ್ ಕಾರ್ಡ್ ನಲ್ಲಿರುವ ಹೆಸರು ಸೇರ್ಪಡೆ, ಹೊಸ ಸದಸ್ಯರು ಸೇರಿಸುವುದು, ಯಾರಾದರೂ ಮೃತಪಟ್ಟರೆ ಅಂಥವರ ಹೆಸರು ಡಿಲೀಟ್, ಬೇರೆ ಜಿಲ್ಲೆಗೆ ವರ್ಗಾವಣೆ ಹಾಗೂ ವಿಳಾಸ ಪರಿಷ್ಕರಣೆ ಮಾಡಲು ಆಹಾರ ಇಲಾಖೆ ಅವಕಾಶ ಕೊಟ್ಟಿದೆ.