Home ಟಾಪ್ ಸುದ್ದಿಗಳು ಅವಹೇಳನಕಾರಿ ಹೇಳಿಕೆ ಆರೋಪ: ವಿಚಾರವಾದಿ ಕೆ.ಎಸ್. ಭಗವಾನ್ ಮನೆಗೆ ಮುತ್ತಿಗೆ ಯತ್ನ

ಅವಹೇಳನಕಾರಿ ಹೇಳಿಕೆ ಆರೋಪ: ವಿಚಾರವಾದಿ ಕೆ.ಎಸ್. ಭಗವಾನ್ ಮನೆಗೆ ಮುತ್ತಿಗೆ ಯತ್ನ

ಮೈಸೂರು: ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಒಕ್ಕಲಿಗ ಸಂಘದ ಸದಸ್ಯರು ವಿಚಾರವಾದಿ ಕೆ.ಎಸ್. ಭಗವಾನ್ ಅವರ ಮನೆಗೆ ಮುತ್ತಿಗೆ ಹಾಕಲು ಶನಿವಾರ ಯತ್ನಿಸಿದರು.

ಆಗ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಘೋಷಣೆ ಕೂಗುತ್ತಾ ರಸ್ತೆಯಲ್ಲೇ ಧರಣಿ ಕುಳಿತರು. ಅವರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು.

ಮಹಿಷ ದಸರಾ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಭಗವಾನ್ ‘ಒಕ್ಕಲಿಗರು ಸಂಸ್ಕೃತಿ ಹೀನ ಪಶುಗಳು ಎಂದು ಕುವೆಂಪು ಹೇಳಿದ್ದರು’ ಎಂದು ಹೇಳಿಕೆ ನೀಡಿದ್ದರು.

Join Whatsapp
Exit mobile version