ರೇವ್ ಪಾರ್ಟಿ ಪ್ರಕರಣ: ತೆಲುಗು ನಟಿ ಹೇಮಾಗೆ ಷರತ್ತುಬದ್ಧ ಜಾಮೀನು

Prasthutha|

ಬೆಂಗಳೂರು: ರೇವ್ ಪಾರ್ಟಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ತೆಲುಗು ನಟಿ ಹೇಮಾಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಎನ್‌ಡಿಪಿಎಸ್ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.‌

- Advertisement -

ರೇವ್ ಪಾರ್ಟಿ ಪ್ರಕರಣದಲ್ಲಿ ಹೇಮಾರನ್ನ ಬಂಧಿಸಲಾಗಿತ್ತು. ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟಿ ಹೇಮಾಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಎನ್‌ಡಿಪಿಎಸ್ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಪಾರ್ಟಿಯಲ್ಲಿ ಡ್ರಗ್ಸ್ ಪಡೆದಿರುವ ಬಗ್ಗೆ ಪಾಸಿಟಿವ್ ರಿಪೋರ್ಟ್ ಬಂದ ಬೆನ್ನಲ್ಲೇ ನಟಿಗೆ 2 ಬಾರಿ ನೋಟಿಸ್ ಪೊಲೀಸರು ನೀಡಿದ್ದರು.

- Advertisement -

ವಿಚಾರಣೆಗೆ ಬಂದ ಹೇಮಾರನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಜೂನ್ 14ರವರೆಗೆ ನಾಲ್ಕನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಮ್‌ಎಫ್‌ಸಿ ನ್ಯಾಯಾಧೀಶರಾದ ಸಲ್ಮಾ ಎ.ಎಸ್ ಅವರಿದ್ದ ಪೀಠ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿತ್ತು. ಈಗ ನಟಿಗೆ ಜಾಮೀನು ಸಿಕ್ಕಿದೆ.

Join Whatsapp