ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಸಿ.ಎಲ್.ಆನಂದ್ ಅವರನ್ನು ವರ್ಗಾವಣೆಗೊಳಿಸಿ, ನೂತನ ಆಯುಕ್ತರಾಗಿ ರವಿಚಂದ್ರ ನಾಯಕ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರವಿಚಂದ್ರ ನಾಯಕ್ ಅವರು ಪ್ರಸ್ತುತ ಶಿವಮೊಗ್ಗ ತುಂಗಾ ಮೇಲ್ದಂಡೆಯೋಜನೆ ವಿಶೇಷ ಭೂಸ್ವಾಧೀನಾಧಿಕಾರಿಯಾಗಿದ್ದರು. ಮಂಗಳೂರಿನಲ್ಲಿ ಈ ಹಿಂದೆ ಸೇವೆ ಸಲ್ಲಿಸಿದ್ದ ರವಿಚಂದ್ರ ನಾಯಕ್ ಅವರು ಸ್ಮಾರ್ಟ್ ಸಿಟಿ ಜಂಟಿ ವ್ಯವಸ್ಥಾಪಕ ನಿರ್ದೇಶಕರಾಗಿ, ಮಂಗಳೂರು ಉಪವಿಭಾಗಾಧಿಕಾರಿಯಾಗಿದ್ದರು.