Home ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಅಧಿಕಾರ ಸ್ವೀಕಾರ

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ಎಂ.ಆರ್ ರವಿಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.


ಪ್ರಭಾರ ಜಿಲ್ಲಾಧಿಕಾರಿಯಾಗಿದ್ದ ಡಾ. ಕುಮಾರ ಅವರು ನೂತನ ಜಿಲ್ಲಾಧಿಕಾರಿ ರವಿಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.

ರವಿಕುಮಾರ್ ಅವರು 2012 ರ ಬ್ಯಾಚ್ ನ ಕರ್ನಾಟಕ ಕೇಡರ್ ನ ಐಎಎಸ್ ಆಗಿದ್ದಾರೆ.


ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಡಾ. ರಾಜೇಂದ್ರ ಕೆ.ವಿ ವರ್ಗಾವಣೆಯ ಬಳಿಕ ಡಾ. ಕುಮಾರ್ ಅವರಿಗೆ ಪ್ರಭಾರ ಜಿಲ್ಲಾಧಿಕಾರಿಯಾಗಿ ಜವಾಬ್ದಾರಿ ನೀಡಲಾಗಿತ್ತು. ಇದೀಗ ಆ ಜವಾಬ್ದಾರಿಯನ್ನು ಎಂ.ಆರ್ ರವಿಕುಮಾರ್ ಅವರಿಗೆ ಹಸ್ತಾಂತರಿಸಿ ಸರಕಾರ ಆದೇಶ ಹೊರಡಿಸಿದೆ.

Join Whatsapp
Exit mobile version