ಏನೇ ಆದ್ರು ನನ್ನ ಫೇವರಿಟ್ RCB, ಕಪ್ ನಮ್ಮದಾಗುವ ಸಮಯ ಬಂದೇ ಬರುತ್ತೆ: ಡಿಕೆಶಿ

Prasthutha|

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾನುವಾರ ರಾಯಲ್ ಚಾಲಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟನ್ಸ್ ನಡುವಿನ ಐಪಿಎಲ್ ಪಂದ್ಯವನ್ನು ವೀಕ್ಷಿಸುವ ಮೂಲಕ ಗಮನ ಸೆಳೆದಿದ್ದಾರೆ.

- Advertisement -


ಮಗಳು ಐಶ್ವರ್ಯಾ, ಮಗನೊಂದಿಗೆ ಪಂದ್ಯ ವೀಕ್ಷಿಸುತ್ತಿರುವ ಫೋಟೊಗಳನ್ನು ಡಿ.ಕೆ.ಶಿವಕುಮಾರ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
‘ಬಿಡುವಿಲ್ಲದ ರಾಜಕೀಯ ಚಟುವಟಿಕೆಗಳ ನಂತರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ RCB ಹಾಗೂ ಗುಜರಾತ್ ಟೈಟನ್ಸ್ ನಡುವಿನ ರೋಚಕ ಪಂದ್ಯವನ್ನು ವೀಕ್ಷಿಸಿದೆ. ನಮ್ಮ ಹುಡುಗರು ಈ ಸಾರಿ ಸೋತಿರಬಹುದು, ಆದರೆ ಅತ್ಯುತ್ತಮ ಆಟದಿಂದ ಎಲ್ಲರ ಹೃದಯ ಗೆದ್ದಿದ್ದಾರೆ. ಏನೇ ಆದ್ರು ನನ್ನ ಫೇವರಿಟ್ RCB. ಕಪ್ ನಮ್ಮದಾಗುವ ಸಮಯ ಬಂದೇ ಬರುತ್ತೆ. ನಿರಾಸೆ ಬೇಡ, ಆಶಾವಾದವಿರಲಿ’ ಎಂದು ಟ್ವೀಟ್ ಮಾಡಿದ್ದಾರೆ.


ವಿರಾಟ್ ಕೊಹ್ಲಿ ಅವರ ದಾಖಲೆಯ ಏಳನೇ ಶತಕದ ನೆರವಿನಿಂದ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 197 ರನ್ ಗಳಿಸಿತ್ತು. ಇದಕ್ಕುತ್ತರವಾಗಿ ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ 19.1 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು.



Join Whatsapp