Home ಟಾಪ್ ಸುದ್ದಿಗಳು ಲಖಿಂಪುರದಲ್ಲಿ ಕ್ರಿಯೆಗೆ ಪ್ರತಿಕ್ರಿಯೆ: ಬಿಜೆಪಿ ಕಾರ್ಯಕರ್ತರ ಹತ್ಯೆಯ ಕುರಿತು ರೈತ ಮುಖಂಡ ರಾಕೇಶ್ ಟಿಕಾಯತ್

ಲಖಿಂಪುರದಲ್ಲಿ ಕ್ರಿಯೆಗೆ ಪ್ರತಿಕ್ರಿಯೆ: ಬಿಜೆಪಿ ಕಾರ್ಯಕರ್ತರ ಹತ್ಯೆಯ ಕುರಿತು ರೈತ ಮುಖಂಡ ರಾಕೇಶ್ ಟಿಕಾಯತ್

ಲಕ್ನೋ: ಉತ್ತರ ಪ್ರದೇಶದ ಲಖಿಂಪುರದಲ್ಲಿ ಇಬ್ಬರು ಬಿಜೆಪಿ ಹತ್ಯೆಯ ಕುರಿತು ಪ್ರತಿಕ್ರಿಯಿಸಿದ ರೈತ ಮುಖಂಡ ರಾಕೇಶ್ ಟಿಕಾಯತ್ ಕೇಂದ್ರ ಸಚಿವರ ಪುತ್ರನ ಕಡೆಯಿಂದ ಉಂಟಾದ ಕ್ರಿಯೆಗೆ ಪ್ರತಿಕ್ರಿಯೆ ನಡೆದಿದೆ. ಇದನ್ನು ತಪ್ಪು ಎಂದು ಕರೆಯಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದರು.

ಲಖಿಂಪುರದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಕೊಂದವರನ್ನು ಅಪರಾಧಿಗಳೆಂದು ಪರಿಗಣಿಸಬೇಡಿ ಎಂದು ರಾಕೇಶ್ ಟಿಕಾಯತ್ ಮಾಧ್ಯಮದೊಂದಿಗೆ ಮಾತನಾಡುತ್ತಾ ತಿಳಿಸಿದರು.

ಈ ಮಧ್ಯೆ ಕೇಂದ್ರ ಸಚಿವ ಅಜಯ್ ಮಿಶ್ರಾ ಸಂಪುಟದಿಂದ ವಜಾಗೊಳಿಸಲು ಮತ್ತು ಪುತ್ರ ಆಶಿಶ್ ಬಂಧನಕ್ಕೆ ಒತ್ತಾಯಿಸಿ ಮತ್ತು ವಿವಾದಿತ ಕೃಷಿ ಕಾನೂನುಗಳನ್ನು ಹಿಂಪಡೆಯಲು ಒತ್ತಾಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್.ಕೆ.ಎಂ) ರೈಲು ರೋಕೋ ಚಳುವಳಿಯನ್ನು ಹಮ್ಮಿಕೊಂಡಿದೆ.

ಅಕ್ಟೋಬರ್ 15 ರಂದು ನಡೆಯುವ ದಸರಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪ್ರತಿಕೃತಿಗಳನ್ನು ದಹಿಸಲಾಗುವುದೆಂದು ಎಸ್.ಕೆ.ಎಂ ಹೇಳಿದೆ. ಮಾತ್ರವಲ್ಲ ಸಂಯುಕ್ತ ಕಿಸಾನ್ ಮೋರ್ಚಾ ಅಕ್ಟೋಬರ್ 12 ರಂದು ಲಖಿಂಪುರದಲ್ಲಿ ಹತ್ಯೆಯಾದ ರೈತರಿಗೆ ಶ್ರದ್ಧಾಂಜಲಿ ನಡೆಸಲಿದೆ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

Join Whatsapp
Exit mobile version