ಗಾಝಿಯಾಬಾದ್: ಮುಂದಿನ ವರ್ಷ ಉತ್ತರ ಪ್ರದೇಶ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅನ್ನು ಹೊತರುಪಡಿಸಿ ಇತರ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಎ.ಐ.ಎಂ.ಐ.ಎಂ ಸಿದ್ಧವಿದೆ ಎಂದು ಪಕ್ಷದ ಮುಖ್ಯಸ್ಥ, ಸಂಸದ ಅಸದುದ್ದೀನ್ ಉವೈಸಿ ತಿಳಿಸಿದ್ದಾರೆ.
ಎಐಎಂಐಎಂ ಈಗಾಗಲೇ ಓಂ ಪ್ರಕಾಶ್ ರಾಜಭರ್ ಅವರ ಭಗಿದರಿ ಸಂಕಲ್ಪ ಮೋರ್ಚಾ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ ಎಂದು ಉವೈಸಿ ತಿಳಿಸಿದರು.
ಮೈತ್ರಿಗೆ ಸಂಬಂಧಿಸಿದಂತೆ ಪ್ರಗತಿಶೀಲ ಸಮಾಜವಾದಿ ಪಕ್ಷದ ನಾಯಕ ಶಿವಪಾಲ್ ಸಿಂಗ್ ಯಾದವ್ ಅವರ ನಿವಾಸದಲ್ಲಿ ಸಭೆ ನಡೆಸಲಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷವನ್ನು ಹೊರತುಪಡಿಸಿ ಇತರ ಯಾವುದೇ ಪಕ್ಷದೊಂದಿಗೆ ಮೈತ್ರಿಗೆ ಸಿದ್ಧರಿದ್ದೇವೆ ಎಂದು ಅವರು ತಿಳಿಸಿದರು.