Home ಟಾಪ್ ಸುದ್ದಿಗಳು ಬಿಜೆಪಿ ಬಯಸಿದರೆ ಹೊಂದಾಣಿಕೆಗೆ ಸಿದ್ಧನಿದ್ದೇನೆ: ಜನಾರ್ಧನ ರೆಡ್ಡಿ

ಬಿಜೆಪಿ ಬಯಸಿದರೆ ಹೊಂದಾಣಿಕೆಗೆ ಸಿದ್ಧನಿದ್ದೇನೆ: ಜನಾರ್ಧನ ರೆಡ್ಡಿ

ಕೊಪ್ಪಳ: ಬಿಜೆಪಿ ಸೇರುವ ಯೋಚನೆಯಿಲ್ಲ, ಆದರೆ ಅವರು ಬಯಸಿದರೆ ಹೊಂದಾಣಿಕೆಗೆ ಸಿದ್ಧನಿದ್ದೇನೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಅಧ್ಯಕ್ಷ ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ.

ಕೊಪ್ಪಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸೇರುವ ಬಯಕೆ ವ್ಯಕ್ತಪಡಿಸಿಲ್ಲ ಆದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಸಿದ್ಧನಿರುವುದಾಗಿ ಹೇಳಿದರು.


ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಬೇಕೆನ್ನುವ ಆಸೆ ತನ್ನಲ್ಲೂ ಇದೆ, ಹಾಗಾಗಿ ಬಿಜೆಪಿ ಬಯಸಿದರೆ ಪಕ್ಷದ ಜೊತೆ ತಾನು ಹೊಂದಾಣಿಕೆ ಮಾಡಿಕೊಳ್ಳಲು ತಯಾರಿದ್ದೇನೆ ಎಂದು ರೆಡ್ಡಿ ಹೇಳಿದರು. ಹೊಂದಾಣಿಕೆ ನಡೆಯದೇ ಹೋದರೂ ಲೋಕಸಭಾ ಚುನಾವಣೆಯಲ್ಲಿ ತನ್ನ ಪಕ್ಷದ ಅಭ್ಯರ್ಥಿಗಳು ಗೆದ್ದರೆ ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟಕ್ಕೆ ಬೆಂಬಲ ನೀಡುವುದಾಗಿ ಜನಾರ್ಧನ ರೆಡ್ಡಿ ಹೇಳಿದರು.

Join Whatsapp
Exit mobile version