ನವದೆಹಲಿ: ಸಾರ್ವಜನಿಕ ವಿಷಯಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಸಾರ್ವಜನಿಕವಾಗಿ ಚರ್ಚೆಗೆ ನಾನು ಸಿದ್ಧನಿದ್ದೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಲಕ್ನೋದಲ್ಲಿ ನಡೆದ ‘ರಾಷ್ಟ್ರೀಯ ಸಂವಿಧಾನ್ ಸಮ್ಮೇಳನ್’ ಎಂಬ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಹೀಗೆ ಹೇಳಿದ್ದಾರೆ.
ಲೋಕಸಭಾ ಚುನಾವಣೆ ನಡೆಯುತ್ತಿರುವ ನಡುವೆಯೇ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಮದನ್ ಬಿ. ಲೋಕುರ್, ದೆಹಲಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಾಧೀಶ ಎ.ಪಿ. ಶಾಹ್ ಹಾಗೂ ಹಿರಿಯ ಪತ್ರಕರ್ತ ಎನ್. ರಾಮ್ ಅವರು ಹಾಲಿ ಲೋಕಸಭೆ ಚುನಾವಣೆ ಕುರಿತು ಬಹಿರಂಗ ಚರ್ಚೆ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸಿದ್ದರು. ಈ ಬಗ್ಗೆ ಕೇಳಿದಾಗ ರಾಹುಲ್ ಗಾಂಧಿ, ಯಾವುದೇ ವೇದಿಕೆಯಲ್ಲಿ ಪ್ರಧಾನಿಯೊಂದಿಗೆ ಚರ್ಚಿಸಲು ನಾನು 100% ಸಿದ್ಧನಿದ್ದೇನೆ ಎಂದು ಪ್ರತಿಪಾದಿಸಿದ್ದಾರೆ.
ಆದರೆ ಪ್ರಧಾನಿ ಮೋದಿ ಬಗ್ಗೆ ನನಗೆ ಚೆನ್ನಾಗಿ ಗೊತ್ತಿದೆ. ಅವರು ನನ್ನೊಂದಿಗೆ 100% ಚರ್ಚಿಸುವುದಿಲ್ಲ ಎಂದೂ ರಾಹುಲ್ ಗಾಂಧಿ ಹೇಳಿದ್ದಾರೆ.