Home ಟಾಪ್ ಸುದ್ದಿಗಳು ಇಡಿ ವಿಚಾರಣೆಗೆ ಹಾಜರಾಗಲು ಸಿದ್ಧ: ಕೇಜ್ರಿವಾಲ್

ಇಡಿ ವಿಚಾರಣೆಗೆ ಹಾಜರಾಗಲು ಸಿದ್ಧ: ಕೇಜ್ರಿವಾಲ್

ನವದೆಹಲಿ: ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಮುಂದೆ ಹಾಜರಾಗಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಒಪ್ಪಿಕೊಂಡಿದ್ದಾರೆ.

ಸಮನ್ಸ್ ಗಳನ್ನು ಕಾನೂನುಬಾಹಿರ ಎಂದು ಕರೆದಿರುವ ಕೇಜ್ರಿವಾಲ್, ಸದ್ಯ ವಿಚಾರಣೆಗೆ ಸಹಕರಿಸುವುದಾಗಿ ಹೇಳಿದ್ದಾರೆ. ವಿಡಿಯೊ ಕಾನ್ಫರೆನ್ಸ್ ಮೂಲಕ ಮಾ. 12ರ ನಂತರ ವಿಚಾರಣೆಯ ದಿನಾಂಕ ನಿಗದಿಪಡಿಸುವಂತೆ ಕೋರಿದ್ದಾರೆ. ಅಬಕಾರಿ ನೀತಿ ಹಗರಣ ಸಂಬಂಧ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಇ.ಡಿ ಬರೋಬ್ಬರಿ ಏಳು ಸಮನ್ಸ್ಗಳನ್ನು ನೀಡಿದೆ. ಆದರೆ ಒಮ್ಮೆಯೂ ವಿಚಾರಣೆಗೆ ಹಾಜರಾಗಿರಲಿಲ್ಲ.

Join Whatsapp
Exit mobile version