ಆದಿತ್ಯನಾಥ್ ವಿರುದ್ಧ ಸ್ಪರ್ಧಿಸಲು ನಾನು ಸಿದ್ಧ । ಡಾ. ಕಫೀಲ್ ಖಾನ್

Prasthutha|

ಲಕ್ನೋ: 2017 ರ ಬಿ.ಆರ್.ಡಿ ವೈದ್ಯಕೀಯ ಕಾಲೇಜು ಆಮ್ಲಜನಕ ಕೊರತೆ ದುರಂತದಲ್ಲಿ ಮಕ್ಕಳು ಸಾವನ್ನಪ್ಪಿದ ಪ್ರಕರಣದಲ್ಲಿ ಸರ್ಕಾರದ ಪಿತೂರಿಯಿಂದ ಬಂಧಿತ ತಜ್ಞ ಡಾ.ಕಫೀಲ್ ಖಾನ್, ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಯಾವುದಾದರೂ ಪಕ್ಷದ ಬೆಂಬಲದೊಂದಿಗೆ ಮುಖ್ಯಮಂತ್ರಿ ಆದಿತ್ಯನಾಥ್ ವಿರುದ್ಧ ಗೋರಖ್ ಪುರ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧ ಎಂದು ಡಾ. ಕಫೀಲ್ ಖಾನ್ ತಿಳಿಸಿದ್ದಾರೆ.

- Advertisement -

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ವಿರುದ್ಧ ಸ್ಪರ್ಧಿಸಲು ಯಾವುದಾದರೂ ಪಕ್ಷ ಟಿಕೆಟ್ ನೀಡಿದರೆ ಸಿದ್ಧವಿರುವುದಾಗಿ ತಿಳಿಸಿದ್ದಾರೆ.

ಕಳೆದ ವರ್ಷ ನವೆಂಬರ್ 9 ರಂದು ಡಾ. ಖಾನ್ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿತ್ತು ಮತ್ತು ಸರ್ಕಾರದ ನಡೆಯನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು.

- Advertisement -

2017 ರ ಆಗಸ್ಟ್ ನಲ್ಲಿ ಬಿ.ಆರ್.ಡಿ. ವೈದ್ಯಕೀಯ ಕಾಲೇಜಿನಲ್ಲಿ ನಡೆದ ಆಕ್ಸಿಜನ್ ದುರಂತದಲ್ಲಿ ಸುಮಾರು 80 ಕುಟುಂಬಗಳ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ. ಕಫೀಲ್ ಖಾನ್ ಅವರನ್ನು ಬಲಿಪಶು ಮಾಡಲಾಗಿತ್ತು.

Join Whatsapp