ಬಾಳೆಹೊನ್ನೂರು: ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದು, ಅವಕಾಶ ನೀಡಿದರೆ ಸ್ಪರ್ಧಿಸುವುದಾಗಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಕೆಲವು ವರ್ಷಗಳಿಂದ ಉಡುಪಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡುತ್ತಿದ್ದೇನೆ. ಬಿಜೆಪಿ ನಾಯಕತ್ವ ಮೆಚ್ಚಿ ಬಿಜೆಪಿ ಸೇರಿದ್ದೇನೆ. ಹಾಲಿ ಸಂಸದರು ಜನಸಾಮಾನ್ಯರಿಗೆ ಸ್ಪಂದಿಸುತ್ತಿಲ್ಲ ಎಂಬ ಆರೋಪಕ್ಕೆ ನಾನು ಮಾತನಾಡುವುದಿಲ್ಲ. ಕರಾವಳಿ ಭಾಗದ ಹಲವು ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸಬೇಕಿದ್ದು, ಪಕ್ಷ ಜವಾಬ್ದಾರಿ ಕೊಟ್ಟರೆ ನಿಭಾಯಿಸುತ್ತೇನೆ ಎಂದಿದ್ದಾರೆ.