Home ಟಾಪ್ ಸುದ್ದಿಗಳು ಕ್ಷೇತ್ರ ಗೆಲ್ಲಬೇಕು ಎಂದಾಗ ಯಾರ ಬಳಿಯಾದರೂ ಮಾತನಾಡಲು ಸಿದ್ಧ: ಹೆಚ್ ಡಿಕೆ

ಕ್ಷೇತ್ರ ಗೆಲ್ಲಬೇಕು ಎಂದಾಗ ಯಾರ ಬಳಿಯಾದರೂ ಮಾತನಾಡಲು ಸಿದ್ಧ: ಹೆಚ್ ಡಿಕೆ

ಹಾಸನ: ಮೈತ್ರಿಯ ವಿಷಯಕ್ಕೆ ಸಂಬಂಧಪಟ್ಟಂತೆ, 28 ಕ್ಷೇತ್ರಗಳನ್ನು ಗೆಲ್ಲಬೇಕು ಎಂಬ ದೃಷ್ಟಿಯಿಂದ ಯಾರನ್ನು ಬೇಕಾದರೂ ಭೇಟಿ ಮಾಡಲು ಮುಕ್ತನಾಗಿದ್ದೇನೆ. ಹಾಗಾಗಿ ಮಾಜಿ ಸಚಿವ ವಿ ಸೋಮಣ್ಣ ಮತ್ತು ಮಾಜಿ ಶಾಸಕ ಸಿ ಟಿ ರವಿ ಮನೆಗೆ ಬಂದು ಮಾತನಾಡಿದ್ದಾರೆ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ಕರಸೇವಕರ ಬಂಧನ ಖಂಡಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರ ಮೇಲೆ ಪ್ರಕರಣ ದಾಖಲು ವಿಚಾರದಲ್ಲಿ ಪ್ರತಿಭಟನೆ ಮಾಡಬಾರದು ಅಂತ ಇದೆಯಾ? ಪ್ರತಿಭಟನೆ ಮಾಡುವುದು ಎಲ್ಲರ ಹಕ್ಕು. ನಮ್ಮ ದೇಶದ ಸಂವಿಧಾನ ವ್ಯವಸ್ಥೆಯಲ್ಲಿ ಯಾವುದೇ ಒಂದು ವಿಷಯಗಳನ್ನು ಪ್ರತಿಭಟನೆ ಮಾಡಲು ಎಲ್ಲರಿಗೂ ಅವಕಾಶ ಇದೆ. ಸಾರ್ವಜನಿಕರಿಗೆ ತೊಂದರೆ, ಕಾನೂನು ಬಾಹಿರವಾಗಿ ಪ್ರತಿಭಟನೆ ಮಾಡಿದರೆ ಕೇಸ್ ಹಾಕಲಿ. ಈ ಸರ್ಕಾರ ನಾವು ಸಂವಿಧಾನದ ರಕ್ಷಕರು ಅಂತ ಜಾಗಟೆ ಹೊಡಿತಾರಲ್ಲ. ಈ ರೀತಿ ಕೇಸ್ ಹಾಕುವುದರಿಂದ ಯಾವ ರೀತಿ ಸಂವಿಧಾನ ರಕ್ಷಣೆ ಮಾಡ್ತಾರೆ ಎಂದು ಟೀಕಿಸಿ, ಅದ್ಯಾವ ಆಧಾರದ ಮೇಲೆ ಕೇಸ್ ಹಾಕಿದ್ದಾರೋ ಗೊತ್ತಿಲ್ಲ ಎಂದರು.

Join Whatsapp
Exit mobile version