Home ಟಾಪ್ ಸುದ್ದಿಗಳು ನಿಜವಾದ ಬ್ರಾಹ್ಮಣರು ಮೋದಿಯನ್ನು ಗರ್ಭಗುಡಿಗೆ ಬಿಡಬಾರದಿತ್ತು: ವೀರಪ್ಪ ಮೊಯ್ಲಿ

ನಿಜವಾದ ಬ್ರಾಹ್ಮಣರು ಮೋದಿಯನ್ನು ಗರ್ಭಗುಡಿಗೆ ಬಿಡಬಾರದಿತ್ತು: ವೀರಪ್ಪ ಮೊಯ್ಲಿ

ಚಿಕ್ಕಬಳ್ಳಾಪುರ: ನಿಜವಾದ ಬ್ರಾಹ್ಮಣರು-ಸ್ವಾಮೀಜಿಗಳು ಆಗಿದ್ರೆ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಗರ್ಭಗುಡಿಗೆ ಬಿಡಬಾರದಿತ್ತು ಅಂತ ಮಾಜಿ ಸಿಎಂ ವೀರಪ್ಪಮೊಯ್ಲಿ ಹೇಳಿದರು.

ಚಿಕ್ಕಬಳ್ಳಾಪುರ ನಗರದಲ್ಲಿ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆ ವೇಳೆ ಮಾತನಾಡಿದ ಅವರು, ರಾಮಮಂದಿರ ಅಪೂರ್ಣ ಮಂದಿರ. ಕೇವಲ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಮಾಡಿದ್ರೆ ಸಾಲದು. ಅಲ್ಲಿ ರಾಮ ಲಕ್ಷಣ, ಸೀತಾ ಹಾಗೂ ಆಂಜನೇಯನ ವಿಗ್ರಹಗಳು ಇರಬೇಕು ಆಗಲೇ ರಾಮಮಂದಿರ ಪೂರ್ಣ ಆಗೋದು ಎಂದರು.

ಗುಜರಾತ್‍ ನ ಹತ್ಯಾಕಾಂಡದ ವೇಳೆ ಅಂದಿನ ಸಿಎಂ ಆಗಿದ್ದ ನರೇಂದ್ರ ಮೋದಿ ರಾಜಧರ್ಮ, ಕಾನೂನು ಪರಿಪಾಲನೆ ಮಾಡಲಿಲ್ಲ. ಅಂತಹ ನರೇಂದ್ರ ಮೋದಿಯವರಿಂದ ರಾಮಲಲ್ಲಾ ಪ್ರತಿಷ್ಠಾಪನೆ ಮಾಡಿಸಿದ್ದು ಎಷ್ಟು ಸರಿ..? ಅವರಿಂದ ದೇವಾಲಯಕ್ಕೆ ಎಷ್ಟು ಪಾವಿತ್ರತ್ಯತೆ ಬರಲಿದೆ ಎಂದು ಪ್ರಶ್ನಿಸಿದರು.

Join Whatsapp
Exit mobile version