ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರ ಬರ್ಬರ ಹತ್ಯೆ

Prasthutha|

ಧಾರವಾಡ : ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಧಾರವಾಡದ ಕಮಲಾಪುರದಲ್ಲಿ ನಡೆದಿದೆ.

- Advertisement -


ರಿಯಲ್ ಎಸ್ಟೇಟ್ ಉದ್ಯಮಿ ಮಹಮ್ಮದ್ ಕುಡಚಿ ಹಾಗೂ ಮತ್ತೊರ್ವ ವ್ಯಕ್ತಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ.
ಮಹಮ್ಮದ್ ಮನೆ ಎದುರು ಕುಳಿತಾಗ ದುಷ್ಕರ್ಮಿಗಳ ಗುಂಪು ಅವರ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದೆ.


ಕುಡಚಿ ಅವರ ಮನೆಯಿಂದ ಅನತಿ ದೂರದಲ್ಲಿ ಮತ್ತೊಂದು ಶವ ಪತ್ತೆಯಾಗಿದೆ. ಆ ಶವ ಕೂಡ ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕುಡಚಿ ಅವರ ಮನೆಯಿಂದಲೇ ಆ ವ್ಯಕ್ತಿ ಕೂಡ ಓಡಿ ಹೋಗಿದ್ದಾನೆ. ದುಷ್ಕರ್ಮಿಗಳು ಆತನನ್ನೂ ಅಟ್ಟಾಡಿಸಿಕೊಂಡು ಹತ್ಯೆ ಮಾಡಿದ್ದಾರೆ. ಆತನ ಹೆಸರು ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸ್ ಆಯುಕ್ತ ರಮಣ್ ಗುಪ್ತಾ ಸೇರಿದಂತೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

Join Whatsapp