Home ಕರಾವಳಿ ಸಚಿವರಿಂದ ಅಹವಾಲು ಸ್ವೀಕಾರ

ಸಚಿವರಿಂದ ಅಹವಾಲು ಸ್ವೀಕಾರ

ಮಂಗಳೂರು: ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್   ಮಂಗಳವಾರ ನಗರದ ಜಿಲ್ಲಾ ಪಂಚಾಯತ್ ನ ಮಿನಿ ಸಭಾಂಗಣದಲ್ಲಿ ಸಾರ್ವಜನಿಕರಿಂದ ಕುಂದು ಕೊರತೆಗಳ ಅಹವಾಲುಗಳನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ಉಮಾನಾಥ್ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್ ಸೇರಿದಂತೆ ವಿವಿಧ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Join Whatsapp
Exit mobile version