Home ಟಾಪ್ ಸುದ್ದಿಗಳು ರೂಪಾಂತರಿ ಚಿಕೂನ್ ಗುನ್ಯಾದಿಂದ ಶಾಸಕ ಸುರೇಶ್ ಕುಮಾರ್ ಚೇತರಿಕೆ, ವದಂತಿಗಳಿಗೆ ಸ್ಪಷ್ಟೀಕರಣ

ರೂಪಾಂತರಿ ಚಿಕೂನ್ ಗುನ್ಯಾದಿಂದ ಶಾಸಕ ಸುರೇಶ್ ಕುಮಾರ್ ಚೇತರಿಕೆ, ವದಂತಿಗಳಿಗೆ ಸ್ಪಷ್ಟೀಕರಣ

ಬೆಂಗಳೂರು: ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರೂಪಾಂತರಿ ಚಿಕೂನ್ ಗುನ್ಯಾದಿಂದ ಬಳಲುತ್ತಿದ್ದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.

ತಮ್ಮ ಅನಾರೋಗ್ಯದ ಬಗ್ಗೆ ವದಂತಿಗಳು ಹರಡಿದ್ದನ್ನು ಮನಗಂಡ ಅವರು ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ. ನಾನು ಆರೋಗ್ಯವಾಗಿದ್ದೇನೆ. ಯಾರೂ ಆತಂಕ ಪಡಬೇಡಿ. ವೈದ್ಯರು ಸಲಹೆ ಮೇರೆಗೆ ಸದ್ಯಕ್ಕೆ ವಿಶ್ರಾಂತಿಯಲ್ಲಿದ್ದೇನೆ. ಯಾರೂ ಕೂಡ ವದಂತಿಗಳಿಗೆ ಕಿವಿ ಕೊಡಬಾರದು. ಕೆಲ ದಿನಗಳಿಂದ ಚಿಕೂನ್ ಗುನ್ಯಾ ಬಾಧಿಸಿದ್ದು‌ ನಿಜ. ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದೇನೆ’ ಎಂದು ತಿಳಿಸಿದ್ದಾರೆ.

ಕಾಳಜಿ ಹೊಂದಿರುವ ಹಿತೈಶಿಗಳು ಅನಗತ್ಯ ಆತಂಕಕ್ಕೆ ಒಳಗಾಗುವುದು ಬೇಡ. ಈಗ ನಾನು ಸಂಪೂರ್ಣವಾಗಿ ಚೇತರಿಕೆ ಕಾಣುತ್ತಿದ್ದೇನೆಎಂದಿದ್ದಾರೆ.

ಬೆಂಗಳೂರಿನ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್‌.ಸುರೇಶ್ ಕುಮಾರ್ ಅವರು ಸೆಪ್ಟೆಂಬರ್ 3ರಂದು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಸದ್ಯ ಸುರೇಶ್ ಕುಮಾರ್ ಗುಣಮುಖರಾಗುತ್ತಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ.

Join Whatsapp
Exit mobile version