ಕೊರೊನಾದಿಂದಾಗಿ ಸೇನಾ ಭರ್ತಿಗೆ ತಡೆ: ಕೇಂದ್ರ ಸಚಿವ ಅಜಯ್ ಭಟ್

Prasthutha|

ನವದೆಹಲಿ: ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಸೇನೆಗೆ ಭರ್ತಿಯನ್ನು ತಡೆಹಿಡಿಯಲಾಗಿದೆ ಎಂದು ಕೇಂದ್ರ ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ತಿಳಿಸಿದ್ದಾರೆ.

- Advertisement -

ಈ ಕುರಿತು ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಸದ್ಯ ಕೊರೊನಾ ಸೋಂಕಿತರ ಪ್ರಮಾಣ ಕಡಿಮೆಯಾಗಿದೆ. ಮುಂದಿನ ದಿನಗಳಲ್ಲಿ ಭಾರತೀಯ ಸೇನೆಗೆ ಭಾರೀ ಸಂಖ್ಯೆಯಲ್ಲಿ ಜನರ ಭರ್ತಿಯಾಗಲಿದೆ. ಇದಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾದ ಕಾರಣ ಸೇನೆಗೆ ಭರ್ತಿ ಪ್ರಕ್ರಿಯೆಯನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ.

ಭಾರತದಲ್ಲಿ ಕೊರೊನಾ ಕಾಣಿಸಿಕೊಂಡ ಬಳಿಕ ಸೇನೆಗೆ ಭರ್ತಿ ಪ್ರಕ್ರಿಯೆಯನ್ನು 2020 – 21 ಮತ್ತು 2021 – 2022 ರ ಸಾಲಿನಲ್ಲಿ ಸ್ಥಗಿತಗೊಳಿಸಲಾಗಿತ್ತು ಎಂದು ಸಚಿವ ಅಜಯ್ ಭಟ್ ತಿಳಿಸಿದ್ದಾರೆ.




Join Whatsapp