Home ಟಾಪ್ ಸುದ್ದಿಗಳು ಕರ್ನಾಟಕದ ಆರು ಜಿಲ್ಲೆಗಳಿಗೆ ಬಿಸಿ ಗಾಳಿಯ ರೆಡ್ ಅಲರ್ಟ್: ಕಲಬುರಗಿಯಲ್ಲಿ 46.7 ಡಿಗ್ರಿ ಸೆಲ್ಸಿಯಸ್ ತಾಪಮಾನ

ಕರ್ನಾಟಕದ ಆರು ಜಿಲ್ಲೆಗಳಿಗೆ ಬಿಸಿ ಗಾಳಿಯ ರೆಡ್ ಅಲರ್ಟ್: ಕಲಬುರಗಿಯಲ್ಲಿ 46.7 ಡಿಗ್ರಿ ಸೆಲ್ಸಿಯಸ್ ತಾಪಮಾನ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚುತ್ತಿದ್ದು, ಉತ್ತರ ಕರ್ನಾಟಕದ ಆರು ಜಿಲ್ಲೆಗಳಿಗೆ ಮುಂದಿನ ಐದು ದಿನ ಬಿಸಿ ಗಾಳಿಯ ರೆಡ್ ಅಲರ್ಟ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಿಗೆ ರೆಡ್ ಅಲರ್ಟ್ ಹಾಗೂ ಕಲಬುರ್ಗಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ.

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕು ಹಾಗೂ ಸುತ್ತಲಿನ ಪರಿಸರದಲ್ಲಿ ಗರಿಷ್ಠ 46.7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ. ಕಲಬುರಗಿ ಜಿಲ್ಲೆಯಲ್ಲಿ ಕಳೆದ 4 ದಿನದಿಂದ ಉಷ್ಣ ಅಲೆಗಳು ರಾಚುತ್ತಿವೆ. ಮಧ್ಯಾಹ್ನ 12 ರಿಂದ ಸಂಜೆ 5 ಗಂಟೆಯವರೆಗೂ ಹೊರಗಡೆ ಹೋಗದೆ ನೆರಳಲ್ಲಿ ಇರುವಂತೆ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಜಿಲ್ಲೆಯ ಜನತೆಗೆ ಮನವಿ ಮಾಡಿದೆ.

Join Whatsapp
Exit mobile version