ದ.ಕ. ಜಿಲ್ಲೆಯಲ್ಲಿ ಮಳೆಯ ಅಬ್ಬರ: ನಾಳೆ (ಜು.19) ರಂದು ರೆಡ್ ಅಲರ್ಟ್

Prasthutha|

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ19 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಎಚ್ಚರಿಕೆ ನೀಡಿದ್ದು, ಅದರಂತೆ ರೆಡ್ ಅಲರ್ಟ್ ಘೋಷಿಸಲಾಗಿದೆ.

- Advertisement -


ಇಂದು ಕೂಡ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಅಲ್ಲದೆ, ನಾಳೆಯಿಂದ ಜು.21ರವರೆಗೆ ಕರಾವಳಿ ಭಾಗದಲ್ಲಿ ಜೋರಾದ ಗಾಳಿ ಮತ್ತು ಮಳೆ ಮುಂದುವರೆಯಲಿದೆ.


ಉತ್ತರ ಒಳನಾಡಿನಲ್ಲಿ ಮಳೆ ಕಡಿಮೆ ಇದೆ. ಆದರೆ, ಜುಲೈ 19ರಿಂದ ಮೂರು ದಿನ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ.ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಅರಬ್ಬೀ ಸಮುದ್ರದಲ್ಲಿ ಮೇಲುಬ್ಬರ(ಟ್ರಫ್) ಉಂಟಾಗಿರುವ ಪರಿಣಾಮ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಕೆಲವೆಡೆ ಭಾರೀ ಮಳೆ ಹಾಗೂ ಮತ್ತೆ ಕೆಲವೆಡೆ ಹಗುರ ಇಲ್ಲವೇ ಸಾಧಾರಣ ಮಳೆಯಾಗುತ್ತಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.



Join Whatsapp