Home ಕರಾವಳಿ ರೆಡ್ ಅಲರ್ಟ್ ಹಿನ್ನಲೆ:  ನಾಳೆ ದ.ಕ. ಜಿಲ್ಲೆಯ ಎಲ್ಲಾ ಶಾಲಾ- ಪದವಿ ಪೂರ್ವ ಕಾಲೇಜಿಗೆ ರಜೆ...

ರೆಡ್ ಅಲರ್ಟ್ ಹಿನ್ನಲೆ:  ನಾಳೆ ದ.ಕ. ಜಿಲ್ಲೆಯ ಎಲ್ಲಾ ಶಾಲಾ- ಪದವಿ ಪೂರ್ವ ಕಾಲೇಜಿಗೆ ರಜೆ ಘೋಷಣೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಹಲವೆಡೆ ಧಾರಾಕಾರ ಮಳೆ ಮುಂದುವರಿದಿದೆ. ಇಂದು ಮಧ್ಯಾಹ್ನ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ಈ ಹಿನ್ನೆಲೆಯಲ್ಲಿ ನಾಳೆಯೂ(ಜು.5) ಜಿಲ್ಲೆಯ ಎಲ್ಲಾ ಶಾಲಾ-ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಜುಲೈ 5ರಂದು ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೈಗೊಂಡಿರುವ ತುರ್ತು ಕ್ರಮಗಳಿವು:

ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.

ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.

ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು.

ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಕಂಟ್ರೋಲ್ ರೂಂ 1077 ಹಾಗೂ ದೂರವಾಣಿ: 0824 – 2442590‌ ಸಂಪರ್ಕಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp
Exit mobile version